ರಾಹುಲ್ ಗಾಂಧಿ - ಅಖಿಲೇಶ್ ಯಾದವ್
ರಾಹುಲ್ ಗಾಂಧಿ - ಅಖಿಲೇಶ್ ಯಾದವ್ 
ದೇಶ

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಅಖಿಲೇಶ್ ಯಾದವ್ ಭಾಗಿ

Lingaraj Badiger

ಆಗ್ರಾ: ಉತ್ತರ ಪ್ರದೇಶದಲ್ಲಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳು ಸೀಟು ಹಂಚಿಕೆ ಒಪ್ಪಂದ ಮಾಡಿಕೊಂಡ ಕೆಲವು ದಿನಗಳ ನಂತರ ಎಸ್ ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಭಾನುವಾರ ಆಗ್ರಾದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಯಲ್ಲಿ ಭಾಗವಹಿಸಿದರು.

ಉತ್ತರ ಪ್ರದೇಶದಲ್ಲಿ ಯಾತ್ರೆಯ ಕೊನೆಯ ಹಂತದಲ್ಲಿ ಅಖಿಲೇಶ್ ಯಾದವ್ ಅವರು ರಾಹುಲ್ ಗಾಂಧಿಗೆ ಸಾಥ್ ನೀಡಿದರು. ಯಾತ್ರೆ ಇಂದು ಆಗ್ರಾದಿಂದ ರಾಜಸ್ಥಾನ ಪ್ರವೇಶಿಸಿದೆ. ಏತನ್ಮಧ್ಯೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಮೊರಾದಾಬಾದ್‌ನಲ್ಲಿ ಶನಿವಾರ ಯಾತ್ರೆಯಲ್ಲಿ ಪಾಲ್ಗೊಂಡರು.

ಅಖಿಲೇಶ್ ಯಾದವ್ ಅವರು ಫೆಬ್ರವರಿ 21 ರಂದೇ ರಾಯ್ ಬರೇಲಿಯಲ್ಲಿ ಯಾತ್ರೆಯಲ್ಲಿ ಭಾಗವಹಿಸಬೇಕಿತ್ತು. ಆದರೆ, ರಾಜ್ಯದಲ್ಲಿ ಕಾಂಗ್ರೆಸ್‌ನೊಂದಿಗೆ ಸೀಟು ಹಂಚಿಕೆ ಅಂತಿಮಗೊಂಡ ನಂತರವೇ ನಾನು ಯಾತ್ರೆಯಲ್ಲಿ ಭಾಗವಹಿಸುತ್ತೇನೆ ಎಂದು ಎಸ್‌ಪಿ ಮುಖ್ಯಸ್ಥ ಹೇಳಿದ್ದರು.

‘ಬಿಜೆಪಿ ಹಠಾವೋ, ದೇಶ್ ಬಚಾವೋ’ ಘೋಷಣೆಯನ್ನು ಎತ್ತಿದ ಎಸ್‌ಪಿ ಮುಖ್ಯಸ್ಥ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಜಾಪ್ರಭುತ್ವ ಮತ್ತು ಭಾರತೀಯ ಸಂವಿಧಾನವನ್ನು ಉಳಿಸುವುದು ಎಲ್ಲಾ ಪಕ್ಷಗಳಿಗೆ ದೊಡ್ಡ ಸವಾಲಾಗಿದೆ ಎಂದು ಹೇಳಿದರು.

ಬಿಜೆಪಿಯನ್ನು ಸೋಲಿಸುವ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ಅವರ ಕನಸನ್ನು ನನಸಾಗಿಸುವುದು ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾದ ಪ್ರಮುಖ ಕಾರ್ಯವಾಗಿದೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

SCROLL FOR NEXT