ಛತ್ತೀಸ್‌ಗಢದಲ್ಲಿ ಮಾವೋವಾದಿಗಳ ಬಂಧನ 
ದೇಶ

ಛತ್ತೀಸ್‌ಗಢದಲ್ಲಿ ನಾಲ್ವರು ಮಾವೋವಾದಿಗಳ ಬಂಧನ; ಭಾರಿ ಪ್ರಮಾಣದ ಸ್ಫೋಟಕ ವಶಕ್ಕೆ

ಛತ್ತೀಸ್‌ಗಢದ ಬಿಜಾಪುರದಲ್ಲಿ ಸೋಮವಾರ ನಾಲ್ವರು ಮಾವೋವಾದಿಗಳನ್ನು ಬಂಧಿಸಲಾಗಿದ್ದು, ಅವರಿಂದ ಭಾರಿ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಿಜಾಪುರ: ಛತ್ತೀಸ್‌ಗಢದ ಬಿಜಾಪುರದಲ್ಲಿ ಸೋಮವಾರ ನಾಲ್ವರು ಮಾವೋವಾದಿಗಳನ್ನು ಬಂಧಿಸಲಾಗಿದ್ದು, ಅವರಿಂದ ಭಾರಿ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸುದ್ರು ಮದ್ವಿ, ರಾಮ್ ಬೆಡ್ಜಾ, ಬುದ್ರಾಮ್ ತಾಟಿ ಮತ್ತು ಸುಖರಾಮ್ ಕಲ್ಮು ಎಂಬ ಮಾವೋವಾದಿಗಳನ್ನು ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಕುಟ್ರು ಪ್ರದೇಶದ ಕತ್ತೂರು ಗ್ರಾಮದ ಮಾರುಕಟ್ಟೆಯಲ್ಲಿ ಬಂಧಿಸಲಾಗಿದ್ದು, ಬಂಧನದ ಬಳಿಕ ನಡೆದ ವಿಚಾರಣೆಯಲ್ಲಿ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಐಇಡಿ ಬಾಂಬ್ ಇಡಲು ಸಂಚು ರೂಪಿಸಿದ್ದರು ಎಂದು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ ಎಂದು ಬಿಜಾಪುರ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ಯಾದವ್ ತಿಳಿಸಿದ್ದಾರೆ.

ಅಲ್ಲದೆ ಬಂಧಿತ ಮಾವೋವಾದಿಗಳಿಂದ ಟಿಫಿನ್ ಬಾಂಬ್, ಪೆನ್ಸಿಲ್ ಸೆಲ್ ಪ್ಯಾಕೆಟ್, ಜಿಲೆಟಿನ್ ಕಡ್ಡಿ ಸೇರಿದಂತೆ ಹಲವು ಬಗೆಯ ಸ್ಫೋಟಕ ಉಪಕರಣಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ಎಸ್ಪಿ ಮಾಹಿತಿ ನೀಡಿದರು.

ರಾಣಿಬೋಡ್ಲಿ, ಕುಟ್ರು, ಮುಕ್ರಂ ಮತ್ತು ತಾಡ್ಮೇರ್ ಪ್ರದೇಶಗಳಲ್ಲಿ ಗಸ್ತಿನಲ್ಲಿದ್ದ ನಕ್ಸಲ್ ನಿಗ್ರಹ ಜಿಲ್ಲಾ ಮೀಸಲು ಪಡೆ ಮತ್ತು ಸ್ಥಳೀಯ ಪೊಲೀಸರು ಅವರನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದ್ವಿಪಕ್ಷೀಯ ಸಂಬಂಧ ವೃದ್ಧಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಡಿ. 5–6 ರಂದು ಭಾರತಕ್ಕೆ ಭೇಟಿ ನಿರೀಕ್ಷೆ

ಗಾಂಧಿ ಜಯಂತಿ 2025: ರಾಜ್‌ಘಾಟ್‌ನಲ್ಲಿ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಪುಷ್ಪ ನಮನ

ಸರ್ಕಾರ ವಿರುದ್ಧ ಸೋನಮ್ ವಾಂಗ್‌ಚುಕ್ ಪತ್ನಿಯಿಂದ ಕಿರುಕುಳದ ಆರೋಪ: ಪ್ರಧಾನಿ, ರಾಷ್ಟ್ರಪತಿಗಳಿಗೆ ಪತ್ರ, ಪತಿಯನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹ

ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗದು: ಸಿಎಂ ಸಿದ್ದರಾಮಯ್ಯ

RSS ಶತಮಾನೋತ್ಸವ: ಈ ಅದ್ಭುತ ಪಯಣ ಭಾರತದ ದಿಕ್ಕನ್ನೇ ಬದಲಾಯಿಸಿದೆ; BJP

SCROLL FOR NEXT