ಬಸ್'ಗೆ ಬೆಂಕಿ ಹಚ್ಚಿರುವುದು. 
ದೇಶ

ಮಹಾರಾಷ್ಟ್ರದಲ್ಲಿ ತೀವ್ರಗೊಂಡ ಮರಾಠ ಮೀಸಲಾತಿ ಹೋರಾಟ: ಸರ್ಕಾರಿ ಬಸ್'ಗೆ ಬೆಂಕಿ, ನಿಷೇಧಾಜ್ಞೆ ಜಾರಿ

ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ಮತ್ತಷ್ಟು ತೀವ್ರಗೊಂಡಿದ್ದು, ಹೋರಾಟಗಾರು ಅಂಬಾದ್​ ಎಂಬಲ್ಲಿ ಸರ್ಕಾರಿ ಬಸ್​​ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಮುಂಬೈ (ಮಹಾರಾಷ್ಟ್ರ): ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ಮತ್ತಷ್ಟು ತೀವ್ರಗೊಂಡಿದ್ದು, ಹೋರಾಟಗಾರು ಅಂಬಾದ್​ ಎಂಬಲ್ಲಿ ಸರ್ಕಾರಿ ಬಸ್​​ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಮರಾಠ ಸಮುದಾಯಕ್ಕೆ ಇತರ ಹಿಂದುಳಿದ ವರ್ಗದ (ಒಬಿಸಿ) ಕೋಟಾದಲ್ಲಿ ಮೀಸಲಾತಿ ನೀಡಬೇಕು ಎಂದು ಕೋರಿ ಹೋರಾಟಗಾರ ಮನೋಜ್​ ಜಾರಂಗೆ ಸರ್ಕಾರದ ವಿರುದ್ಧ ಕೆಲವು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಉದ್ಯೋಗ, ಶಿಕ್ಷಣದಲ್ಲಿ ಶೇ.10 ರಷ್ಟು ಮೀಸಲಾತಿ ನೀಡುವ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿ ಸಿಎಂ ಏಕನಾಥ್​ ಶಿಂಧೆ ನೇತೃತ್ವದ ಸರ್ಕಾರ ಅಂಗೀಕಾರ ಪಡೆದುಕೊಂಡಿದೆ. ಆದರೆ, ಇದಕ್ಕೂ ವಿರೋಧ ವ್ಯಕ್ತವಾಗಿದೆ.

ಸರ್ಕಾರ ಮರಾಠರಿಗೆ ನೀಡಿದ ಆಶ್ವಾಸನೆಯಂತೆ ನಡೆದುಕೊಂಡಿಲ್ಲ. ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸಲು ಹೋರಾಟಗಾರ ಮನೋಜ್​ ಜಾರಂಗೆ ಕರೆ ನೀಡಿದ್ದಾರೆ.

ಇದರಿಂದ ರಾಜ್ಯದ ಹಲವೆಡೆ ಮರಾಠ ಹೋರಾಟ ಮತ್ತೆ ಕಾವು ಪಡೆದುಕೊಂಡಿದೆ. ಸೋಮವಾರದಂದು ಅಂಬಾದ್​ನಲ್ಲಿ ಸರ್ಕಾರಿ ಬಸ್​ಗೆ ಬೆಂಕಿ ಹಚ್ಚಿದ್ದಾರೆ. ಭಾರೀ ಪ್ರಮಾಣದಲ್ಲಿ ಜನರು ಸೇರಿರುವ ಕಾರಣ ಕಾನೂನು ಸುವ್ಯವಸ್ಥೆ ಹದಗೆಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಅವರ ನಿವಾಸಕ್ಕೆ ಮುತ್ತಿಗೆ ಹಾಕುವ ಎಚ್ಚರಿಕೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್​ ಬಂದೋಬಸ್ತ್​ ಏರ್ಪಡಿಸಲಾಗಿದೆ.

ಪ್ರತಿಭಟನಾಕಾರರು ಸರ್ಕಾರಿ ಬಸ್​ಗಳನ್ನು ಗುರಿಯಾಗಿಸಿಕೊಂಡ ಹಿನ್ನೆಲೆಯಲ್ಲಿ ಜಲ್ನಾ ಪ್ರದೇಶದಲ್ಲಿ ಸಂಚಾರವನ್ನು ರದ್ದು ಮಾಡಲಾಗಿದೆ. ಪರಿಸ್ಥಿತಿ ಸೂಕ್ಷ್ಮವಾಗಿರುವ ಕಾರಣ ಪೊಲೀಸ್​ ವರಿಷ್ಠಾಧಿಕಾರಿಗಳ ಸೂಚನೆಯ ಮೇರೆಗೆ ಬಸ್​ ಬಿಡುವುದನ್ನು ತಡೆ ಹಿಡಿಯಲಾಗಿದೆ. ಜೊತೆಗೆ ಅಂಬಾದ್​ನಲ್ಲಿ ಬಸ್​​ ಸುಟ್ಟು ಹಾಕಿದ್ದರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

SCROLL FOR NEXT