ಸಾಂದರ್ಭಿಕ ಚಿತ್ರ 
ದೇಶ

ಪಶ್ಚಿಮ ಬಂಗಾಳದಲ್ಲಿ ಗುಂಡಿಕ್ಕಿ ಟಿಎಂಸಿ ಮುಖಂಡನ ಹತ್ಯೆ!

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಅಶೋಕನಗರದಲ್ಲಿ 49 ವರ್ಷ ವಯಸ್ಸಿನ ತೃಣಮೂಲ ಕಾಂಗ್ರೆಸ್ ಮುಖಂಡರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಅಶೋಕನಗರದಲ್ಲಿ 49 ವರ್ಷ ವಯಸ್ಸಿನ ತೃಣಮೂಲ ಕಾಂಗ್ರೆಸ್ ಮುಖಂಡರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಭೂ ವ್ಯವಹಾರಕ್ಕೆ ಸಂಬಂಧಿಸಿದಂತೆ ವಾಗ್ವಾದದ ನಂತರ ಗುಂಪೊಂದು ಗುಂಡಿಕ್ಕಿ ಹತ್ಯೆ ಮಾಡಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಮೃತನನ್ನು ಟಿಎಂಸಿ ನಾಯಕ ಬಿಜನ್ ದಾಸ್ ಎಂದು ಗುರುತಿಸಲಾಗಿದ್ದು, ಅವರು ಪಕ್ಷದ ಸಹೋದ್ಯೋಗಿಯ ಮನೆಗೆ ಹೋದಾಗ ಹತ್ಯೆಯಾಗಿದ್ದಾರೆ. ಗುಮಾ 1 ಪಂಚಾಯತ್‌ನ ಉಪ ಮುಖ್ಯಸ್ಥರಾಗಿದ್ದ ದಾಸ್ ಅವರಿಗೆ ಎರಡು ಬಾರಿ ಗುಂಡು ಹಾರಿಸಲಾಗಿದೆ. ಈ ಪೈಕಿ ಒಂದು ಗುಂಡು ಅವರ ತಲೆಗೆ ಹೊಡೆದಿದ್ದು, ಇನ್ನೊಂದು ಅವರ ಎಡಕಿವಿ ಮೂಲಕ ಹೊರಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾಸ್ ಅವರನ್ನು ಬರಾಸತ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾರೆ. ಆರೋಪಿಗಳು ತಲೆಮರೆಸಿಕೊಂಡಿದ್ದು, ಈ ಪ್ರಕರಣ ಕುರಿತು ತನಿಖೆ ಮಾಡುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಆಸ್ಪತ್ರೆಗೆ ತೆರಳಿದ ಬರಾಸತ್ ಸಂಸದ ಕಾಕಲಿ ಘೋಷ್ ದಸ್ತಿದಾರ್, ಇದೊಂದು ದುರಂತ ಘಟನೆ ಎಂದು ಹೇಳಿದ್ದಾರೆ.

"ಬಿಜನ್ ಅವರ ಸಾವು ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಅವರು ವಿದ್ಯಾರ್ಥಿ ದೆಸೆಯಿಂದಲೂ ಪಕ್ಷದಲ್ಲಿದ್ದಾರೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಎಂದು ಘೋಷ್ ದಸ್ತಿದಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT