ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ 
ದೇಶ

ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್‌ಗೆ 8ನೇ ಬಾರಿ ಇಡಿ ಸಮನ್ಸ್ ಜಾರಿ

Lingaraj Badiger

ನವದೆಹಲಿ: ಈಗ ರದ್ದಾಗಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಎಂಟನೇ ಬಾರಿ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಮನಿ ಲಾಂಡರಿಂಗ್ ತಡೆ ಕಾಯ್ದೆ(ಪಿಎಂಎಲ್‌ಎ)ಯ ನಿಬಂಧನೆಗಳ ಅಡಿಯಲ್ಲಿ ಎಂಟನೇ ಸಮನ್ಸ್ ಜಾರಿ ಮಾಡಿರುವ ಕೇಂದ್ರ ತನಿಖಾ ಸಂಸ್ಥೆ, ಮಾರ್ಚ್ 4 ರಂದು ತನ್ನ ಮುಂದೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿಗೆ ಕೇಳಿಕೊಂಡಿದೆ.

ಇದಕ್ಕೂ ಮುನ್ನ ಫೆಬ್ರವರಿ 26 ರಂದು, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಏಳನೇ ಬಾರಿ ಸಮನ್ಸ್ ನೀಡಲಾಗಿತ್ತು.

ಕೇಜ್ರಿವಾಲ್ ತನ್ನ ಸಮನ್ಸ್‌ಗಳನ್ನು ನಿರಾಕರಿಸುತ್ತಿರುವ ಕುರಿತು ಜಾರಿ ನಿರ್ದೇಶನಾಲಯ(ಇಡಿ) ನಗರ ನ್ಯಾಯಾಲಯದ ಮೊರೆ ಹೋದ ಬಳಿಕ ಕೋರ್ಟ್ ಮಾರ್ಚ್ 16 ರಂದು ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿಗೆ ಸೂಚಿಸಿದೆ.

ಆಮ್ ಆದ್ಮಿ ಪಕ್ಷದ ವಕ್ತಾರೆ ಪ್ರಿಯಾಂಕಾ ಕಕ್ಕರ್ ಅವರು ಮಾತನಾಡಿ, ಪಕ್ಷವು ಎಲ್ಲಾ ಸಮನ್ಸ್‌ಗಳಿಗೆ ಉತ್ತರಿಸಿದೆ ಮತ್ತು ಪ್ರಕರಣದ ಕುರಿತು ನ್ಯಾಯಾಲಯದ ತೀರ್ಪಿಗಾಗಿ ತನಿಖಾ ಸಂಸ್ಥೆ ಕಾಯಬೇಕಿತ್ತು ಎಂದು ಹೇಳಿದ್ದಾರೆ. ಅಲ್ಲದೆ ಇಡಿ ಸಮನ್ಸ್‌ಗಳು ಅಕ್ರಮ ಎಂದು ಎಎಪಿ ಪದೇ ಪದೇ ಹೇಳುತ್ತಿದೆ.

SCROLL FOR NEXT