ಅಸ್ಸಾಂ ಕಾಂಗ್ರೆಸ್ ನಾಯಕ ರಾಣಾ ಗೋಸ್ವಾಮಿ
ಅಸ್ಸಾಂ ಕಾಂಗ್ರೆಸ್ ನಾಯಕ ರಾಣಾ ಗೋಸ್ವಾಮಿ 
ದೇಶ

ಅಸ್ಸಾಂ: ಕಾಂಗ್ರೆಸ್ ನಾಯಕ ರಾಣಾ ಗೋಸ್ವಾಮಿ ಪಕ್ಷಕ್ಕೆ ರಾಜೀನಾಮೆ, ಬಿಜೆಪಿ ಸೇರುವ ಸಾಧ್ಯತೆ

Ramyashree GN

ಗುವಾಹಟಿ: ಕಾಂಗ್ರೆಸ್ ನಾಯಕ ರಾಣಾ ಗೋಸ್ವಾಮಿ ಅವರು ಬುಧವಾರ ಪಕ್ಷಕ್ಕೆ ರಾಜೀನಾಮೆ ನೀಡಿ, ನವದೆಹಲಿಗೆ ತೆರಳಿದ್ದು, ಅಲ್ಲಿ ಬಿಜೆಪಿ ಸೇರುವ ಸಾಧ್ಯತೆ ಇದೆ.

ಇತ್ತೀಚೆಗೆ ರಾಜ್ಯ ಕಾಂಗ್ರೆಸ್‌ನ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಗೋಸ್ವಾಮಿ ಅವರು ಜೋರ್ಹತ್‌ನ ಮಾಜಿ ಶಾಸಕರಾಗಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್ ಅವರಿಗೆ ರಾಜೀನಾಮೆ ಪತ್ರವನ್ನು ಕಳುಹಿಸಿದ ನಂತರ ಅವರು ದೆಹಲಿಗೆ ತೆರಳಿದ್ದು, ಅಲ್ಲಿ ಅವರು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಪಕ್ಷಕ್ಕೆ ಸೇರುವ ಸಾಧ್ಯತೆಯಿದೆ.

ಗೋಸ್ವಾಮಿ ಅವರು ಬಿಜೆಪಿ ಸೇರುತ್ತಾರೆ ಎಂಬ ಊಹಾಪೋಹಗಳ ಕುರಿತು ಮಂಗಳವಾರ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಅದರ ಬಗ್ಗೆ ಯಾವುದೇ ಮಾಹಿತಿ ಇಲ್ಲ, ಆದರೆ ಅವರು ಕಾಂಗ್ರೆಸ್‌ನ ಪ್ರಬಲ ನಾಯಕ ಮತ್ತು ಅವರು ಬಿಜೆಪಿಗೆ ಸೇರಿದರೆ ನಾನು ಅದನ್ನು ಸ್ವಾಗತಿಸುತ್ತೇನೆ ಎಂದು ಹೇಳಿದರು.

ಈ ತಿಂಗಳ ಆರಂಭದಲ್ಲಿ, ಕಾಂಗ್ರೆಸ್ ಶಾಸಕ ಕಮಲಾಖ್ಯ ಡೇ ಪುರಕಾಯಸ್ಥ ಅವರು ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು ಮತ್ತು ಪಕ್ಷದ ಇನ್ನೊಬ್ಬ ಶಾಸಕ ಬಸಂತ ದಾಸ್ ಅವರೊಂದಿಗೆ ಬಿಜೆಪಿ ನೇತೃತ್ವದ ಸರ್ಕಾರದ "ಅಭಿವೃದ್ಧಿ ಅಜೆಂಡಾ" ಕ್ಕೆ ಬೆಂಬಲ ವ್ಯಕ್ತಪಡಿಸಿದರು.

SCROLL FOR NEXT