ಸಂಗ್ರಹ ಚಿತ್ರ 
ದೇಶ

ಹೊಸ ವರ್ಷ ಎಲ್ಲರಿಗೂ ಸಮೃದ್ಧಿ, ಶಾಂತಿ, ಉತ್ತಮ ಆರೋಗ್ಯ ದೊರೆಯಲಿ: ದೇಶದ ಜನತೆಗೆ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ದೇಶದ್ಯಾಂತ ಹೊಸ ವರ್ಷಚಾರಣೆ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದ್ದು, ಈ ನಡುವಲ್ಲೇ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ.

ನವದೆಹಲಿ: ದೇಶದ್ಯಾಂತ ಹೊಸ ವರ್ಷಚಾರಣೆ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದ್ದು, ಈ ನಡುವಲ್ಲೇ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್)ನಲ್ಲಿ ಪೋಸ್ಟ್ ಮಾಡಿರುವ ಮೋದಿಯವರು, ಎಲ್ಲರಿಗೂ 2024 ರ ಶುಭಾಶಯಗಳು, ಈ ವರ್ಷ ಎಲ್ಲರಿಗೂ ಸಮೃದ್ಧಿ, ಶಾಂತಿ ಮತ್ತು ಉತ್ತಮ ಆರೋಗ್ಯ ದೊರೆಯಲಿ ಎಂದು ಹೇಳಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪೋಸ್ಟ್ ಮಾಡಿ, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು, 2024 ಎಲ್ಲರಿಗೂ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ತರಲಿ. . ಅಂತರ್ಗತ ಮತ್ತು ಸುಸ್ಥಿರ ಅಭಿವೃದ್ಧಿಗೆ ಕೊಡುಗೆ ನೀಡಲು ನವೀಕೃತ ಬದ್ಧತೆಯೊಂದಿಗೆ ಹೊಸ ವರ್ಷವನ್ನು ಸ್ವಾಗತಿಸೋಣ ಎಂದು ತಿಳಿಸಿದ್ದಾರೆ.

ದೇಶದಾದ್ಯಂತ ಹೊಸ ವರ್ಷದ ಸಂಭ್ರಮ ಮನೆ ಮಾಡಿದ್ದು, ವಿಶೇಷವಾಗಿ ಬೆಂಗಳೂರು, ಮುಂಬೈ, ದೆಹಲಿ ಸೇರಿ ಹಲವು ಪ್ರಮುಖ ನಗರಗಳಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟುವಂತಿತ್ತು.

ಬೆಂಗಳೂರಿನ ಎಂ.ಜಿ. ರಸ್ತೆ, ಬ್ರಿಗೇಡ್‌ ರಸ್ತೆ, ಚರ್ಚ್‌ ಸ್ಟ್ರೀಟ್‌ ಸೇರಿ ನಗರದ ಪ್ರಮುಖ ರಸ್ತೆಗಳಲ್ಲಿ ಪಟಾಕಿ ಸಿಡಿಸಿ, ಡಿಜೆ ಸದ್ದಿಗೆ ಕುಣಿದು ಕುಪ್ಪಳಿಸುವ ಮೂಲಕ ಯುವ ಜನರು ಸಂಭ್ರಮದಿಂದ ಹೊಸ ವರ್ಷವನ್ನು ಭಾನುವಾರ ಮಧ್ಯರಾತ್ರಿ ಬರಮಾಡಿಕೊಂಡರು.

ರಾಜ್ಯದ ವಿವಿಧೆಡೆಯಿಂದ ಹೊಸ ವರ್ಷದ ಸಂಭ್ರಮಾಚರಣೆಗೆ ಸಾವಿರಾರು ಜನ ಬೆಂಗಳೂರಿಗೆ ಆಗಮಿಸಿದ್ದರು. ಹೀಗಾಗಿ ಎಂ.ಜಿ. ರಸ್ತೆ, ಬ್ರಿಗೇಡ್‌ ರಸ್ತೆ, ಚರ್ಚ್‌ ಸ್ಟ್ರೀಟ್‌ನ ಪಬ್‌ಗಳು, ಹೋಟೆಲ್‌ಗಳು ತುಂಬಿ ತುಳುಕಿದವು. ಇನ್ನು ರಸ್ತೆಗಳಲ್ಲಿ ಯುವಕ-ಯುವತಿಯರು ರಾತ್ರಿಯಿಡೀ ಕುಣಿದು ಕುಪ್ಪಳಿಸುವ ಮೂಲಕ ಸಂಭ್ರಮಾಚರಣೆ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT