ಸಾಂದರ್ಭಿಕ ಚಿತ್ರ 
ದೇಶ

ದೇಶದಲ್ಲಿ ಇಂದು 573 ಮಂದಿಗೆ ಕೊರೋನಾ ಪಾಸಿಟಿವ್; JN.1 ಪ್ರಕರಣಗಳ ಸಂಖ್ಯೆ 263ಕ್ಕೆ ಏರಿಕೆ

ದೇಶದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಂಗಳಮವಾರ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ ಮತ್ತು ದೇಶಾದ್ಯಂತ 573 ಮಂದಿಗೆ  ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಸಕ್ರಿಯ...

ನವದೆಹಲಿ: ದೇಶದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಂಗಳಮವಾರ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ ಮತ್ತು ದೇಶಾದ್ಯಂತ 573 ಮಂದಿಗೆ  ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,565ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇನ್ನು ಇಂದು ನವೀಕರಿಸಿದ INSACOG ಡೇಟಾ ಪ್ರಕಾರ, ದೇಶದಲ್ಲಿ ಇದುವರೆಗೆ ಒಟ್ಟು 263 ಕೋವಿಡ್-19 ಉಪತಳಿ JN.1 ಪ್ರಕರಣಗಳು ಪತ್ತೆಯಾಗಿವೆ. ಅವುಗಳಲ್ಲಿ ಅರ್ಧದಷ್ಟು ಕೇರಳದಲ್ಲಿ ದಾಖಲಾಗಿವೆ. ಹತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ JN.1 ಪ್ರಕರಣಗಳು ವರದಿಯಾಗಿವೆ.

ಕೇರಳ (133), ಗೋವಾ (51), ಗುಜರಾತ್ (34), ದೆಹಲಿ (16), ಕರ್ನಾಟಕ (ಎಂಟು), ಮಹಾರಾಷ್ಟ್ರ (ಒಂಬತ್ತು), ರಾಜಸ್ಥಾನ (ಐದು), ತಮಿಳುನಾಡು (ನಾಲ್ಕು), ತೆಲಂಗಾಣ (ಎರಡು) ಮತ್ತು ಒಡಿಶಾ (ಒಂದು)ದಲ್ಲಿ ಕೊರೋನಾ ರೂಪಾಂತರಿ JN.1 ಪ್ರಕರಣಗಳು ಪತ್ತೆಯಾಗಿವೆ.

ಇಂದು ಬೆಳಗ್ಗೆ 8 ಗಂಟೆಗೆ ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಯಲ್ಲಿ ಕೋವಿಡ್ ನಿಂದ ಕರ್ನಾಟಕದಲ್ಲಿ ಒಬ್ಬರು ಮತ್ತು ಹರಿಯಾಣದಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಡಿಸೆಂಬರ್ 5 ರವರೆಗೆ ದೈನಂದಿನ ಪ್ರಕರಣಗಳ ಸಂಖ್ಯೆ ಎರಡಂಕಿಗಳಿಗಿಂತ ಕಡಿಮೆ ಇತ್ತು. ಆದರೆ ಹೊಸ ರೂಪಾಂತರಿ ಮತ್ತು ಶೀತ ಹವಾಮಾನದ ನಂತರ ಪ್ರಕರಣಗಳು ಮತ್ತೆ ಹೆಚ್ಚಿವೆ. 2020 ರ ಆರಂಭದಲ್ಲಿ ಪ್ರಾರಂಭವಾದ ಸಾಂಕ್ರಾಮಿಕ ರೋಗದಿಂದ ನಾಲ್ಕು ವರ್ಷಗಳಲ್ಲಿ ದೇಶಾದ್ಯಂತ ಸುಮಾರು 5.3 ಲಕ್ಷಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ ಮತ್ತು ಸುಮಾರು 4.5 ಕೋಟಿಗೂ ಹೆಚ್ಚು ಜನ ಸೋಂಕಿಗೆ ಒಳಗಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT