ಹಿಟ್-ರನ್ ಹೊಸ ಕಾನೂನಿನ ವಿರುದ್ಧ ಟ್ರಕ್ ಚಾಲಕರ ಪ್ರತಿಭಟನೆ 
ದೇಶ

ಟ್ರಕ್ ಚಾಲಕರ ಪ್ರತಿಭಟನೆ: ಹಿಟ್ & ರನ್ ಪ್ರಕರಣಗಳಿಗೆ ಹೊಸ ಕಾನೂನಿಗೇಕೆ ಇಷ್ಟು ವಿರೋಧ?

ಭಾರತೀಯ ನ್ಯಾಯ ಸಂಹಿತೆಯಲ್ಲಿ ಹಿಟ್& ರನ್ ಪ್ರಕರಣಗಳಿಗೆ ಹೊಸ ಕಾನೂನು ಜಾರಿಯಾಗಿದ್ದು, ಇದನ್ನು ವಿರೋಧಿಸಿ ದೇಶದ ವಿವಿಧೆಡೆಗಳಲ್ಲಿ ಟ್ರಕ್ ಚಾಲಕರು ಪ್ರತಿಭಟನೆ ನಡೆಸುತ್ತಿದ್ದು, ಅವರ ಪ್ರತಿಭಟನೆ 2 ನೇ ದಿನಕ್ಕೆ ಕಾಲಿಟ್ಟಿದೆ. 

ನವದೆಹಲಿ: ಭಾರತೀಯ ನ್ಯಾಯ ಸಂಹಿತೆಯಲ್ಲಿ ಹಿಟ್& ರನ್ ಪ್ರಕರಣಗಳಿಗೆ ಹೊಸ ಕಾನೂನು ಜಾರಿಯಾಗಿದ್ದು, ಇದನ್ನು ವಿರೋಧಿಸಿ ದೇಶದ ವಿವಿಧೆಡೆಗಳಲ್ಲಿ ಟ್ರಕ್ ಚಾಲಕರು ಪ್ರತಿಭಟನೆ ನಡೆಸುತ್ತಿದ್ದು, ಅವರ ಪ್ರತಿಭಟನೆ 2 ನೇ ದಿನಕ್ಕೆ ಕಾಲಿಟ್ಟಿದೆ. 

ಅಜಾಗರೂಕ ಚಾಲನೆಯಿಂದ ಡಿಕ್ಕಿ ಹೊಡೆದು ಪೊಲೀಸ್ ಅಥವಾ ಸ್ಥಳೀಯ ಆಡಳಿತಕ್ಕೆ ತಿಳಿಸದೇ ಸ್ಥಳದಿಂದ ಪರಾರಿಯಾಗುವ ಚಾಲಕರಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ 7 ಲಕ್ಷ ರೂಪಾಯಿ ದಂಡ ವಿಧಿಸುವ ಶಿಕ್ಷೆಯನ್ನು ಹೊಸ ಕಾಯ್ದೆ ಜಾರಿಗೆ ತಂದಿದೆ. 

ಹೊಸ ಕಾನೂನಿಗೆ ಹಲವು ರೈತ ಸಂಘಟನೆಗಳು ಹಾಗೂ ಚಾಲಕರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಮಹಾರಾಷ್ಟ್ರದಲ್ಲಿ ಚಾಲಕರ ಪ್ರತಿಭಟನೆಯ ಪರಿಣಾಮ ಪೆಟ್ರೋಲ್ ಬಂಕ್ ಗಳ ಮೇಲೂ ಉಂಟಾಗಿದ್ದು, ಈ ಪ್ರತಿಭಟನೆ ಹೀಗೇ ಮುಂದುವರೆದರೆ ಹಲವು ಪೆಟ್ರೋಲ್ ಬಂಕ್ ಗಳು ಖಾಲಿಯಾಗಿರಲಿವೆ ಎಂದು ಪೆಟ್ರೋಲ್ ಬಂಕ್ ಡೀಲರ್ಸ್ ಗಳ ಒಕ್ಕೂಟ ಎಚ್ಚರಿಕೆ ನೀಡಿದೆ. 

ಇನ್ನು ಟ್ರಕ್ ಚಾಲಕರ ಪ್ರತಿಭಟನೆಯಿಂದಾಗಿ ಮುಂಬೈ ಗೆ ಅಗತ್ಯ ಸರಕುಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂಬ ವರದಿಗಳು ಪ್ರಕಟವಾಗಿದೆ. ಹಿಟ್& ರನ್ ಪ್ರಕರಣಗಳಿಗೆ ಕಠಿಣ ಶಿಕ್ಷೆ ವಿಧಿಸುವ ಅಂಶಗಳನ್ನು ಇತ್ತೀಚೆಗಷ್ಟೇ ಜಾರಿಗೆ ತಂದ ಭಾರತೀಯ ನ್ಯಾಯ ಸಂಹಿತೆಯಲ್ಲಿ ಅಳವಡಿಸಲಾಗಿದೆ. 

ಒಂದು ವೇಳೆ ಚಾಲಕನೋರ್ವ ಅಜಾಗರೂಕತೆ ಅಥವಾ ಮಿತಿಮೀರಿದ ವೇಗದ ಪರಿಣಾಮ ಅಪಘಾತ ಉಂಟುಮಾಡಿ ಸ್ಥಳದಿಂದ ಪರಾರಿಯಾದರೆ, 10 ವರ್ಷಗಳ ಜೈಲು ಶಿಕ್ಷೆ ಹಾಗೂ 7 ಲಕ್ಷ ರೂಪಾಯಿ ದಂಡದ ಶಿಕ್ಷೆ ಎದುರಿಸಬೇಕಾಗುತ್ತದೆ. ಒಂದು ವೇಳೆ ತಾನು ಮಾಡಿದ ಅಪಘಾತದ ಕೃತ್ಯವನ್ನು ಪೊಲೀಸರು ಹಾಗೂ ಮ್ಯಾಜಿಸ್ಟ್ರೇಟ್ ಅವರ ಗಮನಕ್ಕೆ ತಂದಲ್ಲಿ ಜೈಲು ಶಿಕ್ಷೆ ಅವಧಿಯನ್ನು 5 ವರ್ಷಕ್ಕೆ ಇಳಿಕೆ ಮಾಡಲಾಗಿದೆ. 

ಈ ಹಿಂದಿನ ಕಾನೂನು ಏನು ಹೇಳುತ್ತಿತ್ತು?

ಐಪಿಸಿ ಸೆಕ್ಷನ್ 304 ರ ಅಡಿಯಲ್ಲಿ ಈ ಹಿಂದೆ ಹಿಟ್& ರನ್ ಗೆ 2 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗುತ್ತಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?