ಸಂಗ್ರಹ ಚಿತ್ರ 
ದೇಶ

ಮತ್ತೆ ಏರಿಕೆಯ ಹಾದಿಯತ್ತ ಕೊರೋನಾ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 602 ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 4,440

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 602 ಹೊಸ ಕೋವಿಡ್ 19 ಪ್ರಕರಣಗಳು ಮತ್ತು 5 ಸಾವು ದಾಖಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 602 ಹೊಸ ಕೋವಿಡ್ 19 ಪ್ರಕರಣಗಳು ಮತ್ತು 5 ಸಾವು ದಾಖಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ 602 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ  4,50,15,083 ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 4,440ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ.

ಕೋವಿಡ್ ನಿಂದ ಈ ವರೆಗೆ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,33,371ಕ್ಕೆ ಏರಿಕೆಯಾಗಿದ್ದು, ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,44,77,272ಕ್ಕೆ ತಲುಪಿದೆ.

ಇನ್ನು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 17,605 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 93,58,79,495 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,20,67,79,081 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಇಂದಿರಾ, ದೇವೇಗೌಡ ಅಪ್ಪಾಜಿ ಕ್ಯಾಂಟೀನ್ ಬಂದ್!

ಇಂಧನ ಸುರಕ್ಷತೆ ಕುರಿತು ಇರಾನ್ ವಿದೇಶಾಂಗ ಸಚಿವರೊಂದಿಗೆ ಜೈಶಂಕರ್ ಮೂರು ಬಾರಿ ಮಾತುಕತೆ

ನೀವು ಮಿತಿ ಮೀರಿದ್ದೀರಿ: ಕನ್ನಡದಲ್ಲೇ ಎಚ್ಚರಿಕೆ ಕೊಟ್ಟ ರಶ್ಮಿಕಾ; ಸಂಕಷ್ಟದ ಸಮಯದಲ್ಲಿ ಕನ್ನಡವೇ ಬೇಕಾಯ್ತಾ? ಎಂದ ನೆಟ್ಟಿಗರು!

ಬಂಡೀಪುರ, ನಾಗರಹೊಳೆ ಸಫಾರಿ ತಾತ್ಕಾಲಿಕ ಸ್ಥಗಿತ ಸಮರ್ಥಿಸಿಕೊಂಡ ಖಂಡ್ರೆ; ಷರತ್ತುಬದ್ಧ ಆರಂಭ

SCROLL FOR NEXT