ದೇಶ

ಅಸ್ಸಾಂ ರಸ್ತೆ ಅಪಘಾತ: ಮೃತರಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

Manjula VN

ನವದೆಹಲಿ: ಅಸ್ಸಾಂನ ಗೋಲಾಘಾಟ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತರಿಗೆ 2 ಲಕ್ಷ ರೂ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ.ಪರಿಹಾರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬುಧವಾರ ಘೋಷಿಸಿದ್ದಾರೆ.

 ಅಪಘಾತದ ಬಗ್ಗೆ ಪ್ರಧಾನಿ ಮೋದಿ ಅವರು ಸಾಮಾಜಿಕ ಮಾಧ್ಯಮ ವೇದಿಕೆ X(ಎಕ್ಸ್​) ನಲ್ಲಿ ಪೋಸ್ಟ್ ಮಾಡಿದ್ದು, ಮೃತರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.

ಅಸ್ಸಾಂನ ಗೋಲಾಘಾಟ್ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.” ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರವು ಪ್ರಧಾನಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿಗಳನ್ನು ನೀಡಲಾಗುತ್ತದೆ ಎಂದು ಪ್ರಧಾನಮಂತ್ರಿಗಳ ಕಚೇರಿ ಮಾಹಿತಿ ನೀಡಿದೆ.

ರಾಷ್ಚ್ರಪತಿ ದ್ರೌಪದಿ ಮುರ್ಮು ಅವರು ಪೋಸ್ಟ್ ಮಾಡಿ, ಅಸ್ಸಾಂನ ಗೋಲಾಘಾಟ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹಲವರ ಸಾವು ಅತೀವ್ರ ದುಃಖವನ್ನು ತಂದಿದೆ ದುಃಖಿತ ಕುಟುಂಬಗಳಿಗೆ ಸಂತಾಪವನ್ನು ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.

SCROLL FOR NEXT