ಪಶ್ಚಿಮ ಬಂಗಾಳದಲ್ಲಿ ಭೀಕರ ರಸ್ತೆ ಅಪಘಾತ: ಗಸ್ತು ತಿರುಗುತ್ತಿದ್ದ ವಾಹನಕ್ಕೆ ಕಾರು ಡಿಕ್ಕಿ, ಇಬ್ಬರು ಪೊಲೀಸರ ದುರ್ಮರಣ
ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಗಸ್ತು ತಿರುಗುತ್ತಿದ್ದ ವ್ಯಾನ್ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸಬ್ಇನ್ಸ್ಪೆಕ್ಟರ್ ಸೇರಿ ಇಬ್ಬರು ಪೊಲೀಸರು ಸಾವನ್ನಪ್ಪಿದ್ದು, ಮೂವರಿಗೆ ಗಾಯವಾಗಿರುವ ಘಟನೆ ಗುರುವಾರ ನಡೆದಿದೆ.
ಹೌರಾ: ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಗಸ್ತು ತಿರುಗುತ್ತಿದ್ದ ವ್ಯಾನ್ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸಬ್ಇನ್ಸ್ಪೆಕ್ಟರ್ ಸೇರಿ ಇಬ್ಬರು ಪೊಲೀಸರು ಸಾವನ್ನಪ್ಪಿದ್ದು, ಮೂವರಿಗೆ ಗಾಯವಾಗಿರುವ ಘಟನೆ ಗುರುವಾರ ನಡೆದಿದೆ.
ಇಂದು ಬೆಳಿಗಿನ ಜಾವ ಬಗ್ನಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಬರುಂಡಾ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 16 ರಲ್ಲಿ ದುರ್ಘಟನೆ ಸಂಭವಿಸಿದೆ. ಸಬ್ ಇನ್ಸ್ಪೆಕ್ಟರ್ ಸುಜೋಯ್ ದಾಸ್ (45) ಮತ್ತು ಹೋಮ್ ಗಾರ್ಡ್ ಪಲಾಶ್ ಸಮಂತ (31) ಮೃತಪಟ್ಟವರೆಂದು ತಿಳಿದುಬಂದಿದೆ.
ಗಾಯಗೊಂಡ ಮೂವರು ಪೊಲೀಸರನ್ನು ಚಾಲಕ ಅಬು ಬಕರ್ (28) ಮತ್ತು ಗೃಹ ರಕ್ಷಕ ದಳದ ಸುಖದೇಬ್ ಬಿಸ್ವಾಸ್ (25) ಮತ್ತು ಅಲೋಕ್ ಬಾರ್ (26) ಎಂದು ಗುರುತಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೂವರನ್ನು ಕೋಲ್ಕತ್ತಾ ಮೂಲದ ಎಸ್ಎಸ್ಕೆಎಂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಹೌರಾ ನಗರಕ್ಕೆ ಹೋಗುತ್ತಿದ್ದ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಪೊಲೀಸರ ಗಸ್ತು ತಿರುಗುವ ವಾಹನದ ಹಿಂಭಾಗಕ್ಕೆ ಡಿಕ್ಕಿ ಹೊಡೆದೆದಿದೆ. ಘಟನೆ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆ ಸಂಬಂಧ ಹೌರಾ (ಗ್ರಾಮೀಣ) ಎಸ್ಪಿ ಸ್ವಾತಿ ಭಂಗಾಲಿಯಾ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಘಟನೆ ಸಂಬಂಧ ಎಡಿಜಿ ಮತ್ತು ಐಜಿಪಿ (ದಕ್ಷಿಣ ಬಂಗಾಳ) ಸಿದ್ಧಿ ನಾಥ್ ಗುಪ್ತಾ ಅವರು, ಡಿಕ್ಕಿ ಹೊಡೆದ ಕಾರಿಗಾಗಿ ಹುಡುಕಾಟ ಆರಂಭಿಸಿದ್ದಾರೆಂದು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.