ಕಾಶ್ಮೀರದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ 
ದೇಶ

ರಾಹುಲ್ ಗಾಂಧಿ ನೇತೃತ್ವದ ಯಾತ್ರೆಗೆ 'ಭಾರತ್ ಜೋಡೋ ನ್ಯಾಯ್ ಯಾತ್ರೆ' ಎಂದು ಮರುನಾಮಕರಣ

ಜನವರಿ 14 ರಂದು ಪ್ರಾರಂಭವಾಗಲಿರುವ ರಾಹುಲ್ ಗಾಂಧಿ ನೇತೃತ್ವದ ಮಣಿಪುರ-ಮುಂಬೈ ಯಾತ್ರೆಯನ್ನು ಕಾಂಗ್ರೆಸ್ ಗುರುವಾರ 'ಭಾರತ್ ಜೋಡೋ ನ್ಯಾಯ್ ಯಾತ್ರೆ' ಎಂದು ಮರುನಾಮಕರಣ ಮಾಡಿದೆ. ಈ ಯಾತ್ರೆ ಅರುಣಾಚಲ...

ನವದೆಹಲಿ: ಜನವರಿ 14 ರಂದು ಪ್ರಾರಂಭವಾಗಲಿರುವ ರಾಹುಲ್ ಗಾಂಧಿ ನೇತೃತ್ವದ ಮಣಿಪುರ-ಮುಂಬೈ ಯಾತ್ರೆಯನ್ನು ಕಾಂಗ್ರೆಸ್ ಗುರುವಾರ 'ಭಾರತ್ ಜೋಡೋ ನ್ಯಾಯ್ ಯಾತ್ರೆ' ಎಂದು ಮರುನಾಮಕರಣ ಮಾಡಿದೆ. ಈ ಯಾತ್ರೆ ಅರುಣಾಚಲ ಪ್ರದೇಶ ಸೇರಿದಂತೆ 15 ರಾಜ್ಯಗಳಲ್ಲಿ ಸಾಗಲಿದೆ.

ಇಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದ ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಉಸ್ತುವಾರಿಗಳು, ರಾಜ್ಯ ಘಟಕದ ಅಧ್ಯಕ್ಷರು ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಸಭೆಯ ನಂತರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ರಾಹುಲ್ ಗಾಂಧಿ ಯಾತ್ರೆಯನ್ನು 'ಭಾರತ್ ಜೋಡೋ ನ್ಯಾಯ್ ಯಾತ್ರೆ' ಎಂದು ಮರುನಾಮಕರಣ ಮಾಡಿರುವುದಾಗಿ ಘೋಷಿಸಿದರು.

ಇದಕ್ಕು ಮೊದಲು ಭಾರತ್ ನ್ಯಾಯ್ ಯಾತ್ರೆ ಎಂದು ಹೆಸರಿಸಲಾಗಿತ್ತು.

ಈ ಯಾತ್ರೆಯಲ್ಲಿ ಭಾಗವಹಿಸಲು ಎಲ್ಲಾ ಇಂಡಿಯಾ ಮೈತ್ರಿಕೂಟದ ಎಲ್ಲಾ ನಾಯಕರನ್ನು ಕಾಂಗ್ರೆಸ್ ಆಹ್ವಾನಿಸುತ್ತಿದೆ ಮತ್ತು ಇದಕ್ಕಾಗಿ ಆಹ್ವಾನಗಳನ್ನು ಕಳುಹಿಸಲಾಗುತ್ತಿದೆ ಎಂದು ರಮೇಶ್ ತಿಳಿಸಿದ್ದಾರೆ.

6,713 ಕಿ.ಮೀ.ಗೂ ಹೆಚ್ಚು ದೂರ ಸಾಗುವ ಈ ಯಾತ್ರೆಯು ಬಸ್‌ಗಳಲ್ಲಿ ಹಾಗೂ ಕಾಲ್ನಡಿಗೆಯಲ್ಲಿ ಕ್ರಮಿಸಲಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಈ ಯಾತ್ರೆಯು 110 ಜಿಲ್ಲೆಗಳು, ಸುಮಾರು 100 ಲೋಕಸಭಾ ಕ್ಷೇತ್ರಗಳು ಮತ್ತು 337 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪುತ್ರಿಯರ ಅಕ್ರಮ ನೇಮಕಕ್ಕೆ ನೆರವು: 'KPSC' ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅಮಾನತುಗೊಳಿಸಿ ರಾಜ್ಯಪಾಲರ ಆದೇಶ

US-Iran ಸಂಘರ್ಷ ತೀವ್ರ: Hormuz ಜಲಸಂಧಿ ಬಳಿ ಅಮೆರಿಕ ಭೀಕರ ವೈಮಾನಿಕ ದಾಳಿ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ..!

ಬದಲಾದ ಸಂಸತ್ ಬಲಾಬಲದ ನಡುವೆ ಮುಂಗಾರು ಅಧಿವೇಶನ; ಜು.19 ರಂದು ಸರ್ವಪಕ್ಷಗಳ ಸಭೆ; ಜಿದ್ದಾಜಿದ್ದಿನ ರಾಜಕೀಯಕ್ಕೆ ವೇದಿಕೆ ಸಜ್ಜು..!

ನ್ಯಾಷನಲ್ ಕಾನ್ಫರೆನ್ಸ್ ಶಾಸಕರ ಖರೀದಿ ಆರೋಪ: CM ಒಮರ್ ಅಬ್ದುಲ್ಲಾಗೆ ಬಿಗ್ ಶಾಕ್, 100 ಕೋಟಿ ರೂ. ಮಾನನಷ್ಟ ನೋಟಿಸ್!

'Jurassic Park' ಖ್ಯಾತಿಯ ಹಿರಿಯ ನಟ ಸ್ಯಾಮ್ ನೀಲ್ ಹಠಾತ್ ನಿಧನ!