ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಭಾರತದಲ್ಲಿ ಕೊರೋನಾ ಹೆಚ್ಚಳ: ಕಳೆದ 24 ಗಂಟೆಗಳಲ್ಲಿ 760 ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 4,423

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 760 ಹೊಸ ಕೋವಿಡ್ 19 ಪ್ರಕರಣಗಳು ಮತ್ತು 2 ಸಾವು ದಾಖಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಸಂಗ್ರಹ ಚಿತ್ರ
Manjula VN
Updated On : 4 Jan 2024, 12:50 pm

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 760  ಹೊಸ ಕೋವಿಡ್ 19 ಪ್ರಕರಣಗಳು ಮತ್ತು 2 ಸಾವು ದಾಖಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ 760  ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4,50,15,843 ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 4,423ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ.

ಕೋವಿಡ್ ನಿಂದ ಈ ವರೆಗೆ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,33,373ಕ್ಕೆ ಏರಿಕೆಯಾಗಿದ್ದು, ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,44,78,047ಕ್ಕೆ ತಲುಪಿದೆ.

Advertisement

Advertisement

ಇದನ್ನೂ ಓದಿ: ಕೋವಿಡ್ ರೂಪಾಂತರಿ ಜೆಎನ್​.1: ದೇಶದ 11 ರಾಜ್ಯಗಳಲ್ಲಿ 511 ಪ್ರಕರಣ ಪತ್ತೆ; ನಂ.1 ಸ್ಥಾನದಲ್ಲಿ ಕರ್ನಾಟಕ!

ಇನ್ನು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 17,605 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 93,58,79,495 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,20,67,79,081 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments