ಸಂಗ್ರಹ ಚಿತ್ರ 
ದೇಶ

ಉಗ್ರರು ಅಡಗಿರುವ ಶಂಕೆ: ಶೋಪಿಯಾನ್ ಜಿಲ್ಲೆಯಲ್ಲಿ ಎನ್ಕೌಂಟರ್ ಆರಂಭ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಎನ್ಕೌಂಟರ್ ಆರಂಭಿಸಿವೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಎನ್ಕೌಂಟರ್ ಆರಂಭಿಸಿವೆ.

ಶೋಪಿಯಾನ್ ಜಿಲ್ಲೆಯ ಚೋಟಿಗಮ್ ಪ್ರದೇಶದಲ್ಲಿ ಪ್ರಸ್ತುತ ಭಾರತೀಯ ಸೇನೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ಮುಂದುವರೆದಿದೆ.

ಪೊಲೀಸ್, ಸೇನೆ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಈ ಕುರಿತು ಹೆಚ್ಚಿನ ವಿವರಗಳಿಗಾಗಿ ನಿರೀಕ್ಷಿಸಲಾಗುತ್ತಿದೆ" ಎಂದು ಕಾಶ್ಮೀರ ವಲಯ ಪೊಲೀಸರು ಸಾಮಾಜಿಕ ಜಾಲತಾಣ ಎಕ್ಸ್​​​ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಮತ್ತೊಂದೆಡೆ, ಜಮ್ಮು ಕಾಶ್ಮೀರದ ಕುಲ್ಗಾಮ್​ ಜಿಲ್ಲೆಯ ಹಡಿಗಾಂ ಎಂಬಲ್ಲಿ ಬುಧವಾರ ರಾತ್ರಿಯಿಂದಲೇ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಈ ಎನ್‌ಕೌಂಟರ್ ಗುರುವಾರವೂ ಮುಂದುವರೆದಿತ್ತು.

ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಮತ್ತು ಸೇನಾ ಪಡೆ ಜಂಟಿ ಕಾರ್ಯಾಚರಣೆ ನಡೆಸಿದ್ದವು. ಸೇನಾ ತಂಡಗಳು ಶಂಕಿತ ಸ್ಥಳಕ್ಕೆ ತಲುಪಿದ್ದ ವೇಳೆ ಏಕಾಏಕಿ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಸೇನೆಯೂ ಗುಂಡಿನ ದಾಳಿ ನಡೆಸಿತ್ತು.

ಇದಕ್ಕೂ ಮುನ್ನ ಡಿಸೆಂಬರ್ 22 ರಂದು ಜಮ್ಮುವಿನ ಪೂಂಚ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಐವರು ಸೈನಿಕರು ಹುತಾತ್ಮರಾಗಿದ್ದರು. ಇದರ ಬೆನ್ನಲ್ಲೇ ಮೂವರು ನಾಗರಿಕರು ಕೂಡ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವುದು ವರದಿಯಾಗಿತ್ತು.

ಅಂಕಿ-ಅಂಶಗಳ ಪ್ರಕಾರ 2023 ರಲ್ಲಿ, ಜಮ್ಮು ಮತ್ತು ಕಾಶ್ಮೀರದಲ್ಲಿ 87 ಕ್ಕೂ ಹೆಚ್ಚು ಉಗ್ರಗಾಮಿಗಳು, 33 ಭದ್ರತಾ ಪಡೆಗಳ ಸಿಬ್ಬಂದಿ ಮತ್ತು 12 ಕ್ಕೂ ಹೆಚ್ಚು ನಾಗರಿಕರು ಸೇರಿದಂತೆ ಉಗ್ರ ದಾಳಿಗಳಲ್ಲಿ 134 ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT