ದೇಶ

ಸಂಸತ್ ಭದ್ರತಾ ಲೋಪ: ಪಾಲಿಗ್ರಾಫ್ ಪರೀಕ್ಷೆಗೆ ಒಪ್ಪಿದ ಐವರು ಆರೋಪಿಗಳು, ಒಬ್ಬ ನಕಾರ

Lingaraj Badiger

ನವದೆಹಲಿ: ಸಂಸತ್ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಆರು ಆರೋಪಿಗಳ ಪೈಕಿ ಐವರು ಶುಕ್ರವಾರ ನ್ಯಾಯಾಲಯದ ಮುಂದೆ ತಮ್ಮನ್ನು ಪಾಲಿಗ್ರಾಫ್ ಪರೀಕ್ಷೆಗೆ ಒಳಪಡಿಸಲು ಒಪ್ಪಿಗೆ ನೀಡಿದ್ದಾರೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಹರ್ದೀಪ್ ಕೌರ್ ಅವರು ಎಲ್ಲಾ ಆರು ಆರೋಪಿಗಳ ಪೊಲೀಸ್ ಕಸ್ಟಡಿಯನ್ನು 8 ದಿನಗಳ ಕಾಲ ವಿಸ್ತರಿಸಿದ್ದಾರೆ.

ಆರೋಪಿಗಳಾದ ಮನೋರಂಜನ್ ಡಿ, ಸಾಗರ್ ಶರ್ಮಾ, ಅಮೋಲ್ ಧನರಾಜ್ ಶಿಂಧೆ, ನೀಲಂ ಆಜಾದ್, ಲಲಿತ್ ಝಾ ಮತ್ತು ಮಹೇಶ್ ಕುಮಾವತ್ ಅವರ ಪೊಲೀಸ್ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಆರೋಪಿಗಳ ವಿಚಾರಣೆ ನಡೆಸಿದ ನ್ಯಾಯಾಧೀಶರು ಪೊಲೀಸ್ ಕಸ್ಟಡಿ ಅವಧಿಯನ್ನು ವಿಸ್ತರಿಸಿದರು.

ಆಜಾದ್ ಹೊರತುಪಡಿಸಿ ಇತರ ಐವರು ಆರೋಪಿಗಳು ನ್ಯಾಯಾಲಯದ ಮುಂದೆ ಪಾಲಿಗ್ರಾಫ್ ಪರೀಕ್ಷೆಗೆ ಒಪ್ಪಿಗೆ ನೀಡಿದರು.

ಎಲ್ಲ ಆರೋಪಿಗಳ ಪಾಲಿಗ್ರಾಫ್ ಪರೀಕ್ಷೆ ನಡೆಸಲು ಅನುಮತಿ ಕೋರಿ ದೆಹಲಿ ಪೊಲೀಸರು ಈ ಹಿಂದೆ ನ್ಯಾಯಾಲಯದ ಮೊರೆ ಹೋಗಿದ್ದರು.

SCROLL FOR NEXT