ದೇಶ

ಪಕ್ಷ ಸೇರಿದ ಒಂದೇ ವಾರಕ್ಕೆ YSR Congress ಗೆ ಕ್ರಿಕೆಟಿಗ ಅಂಬಾಟಿ ರಾಯುಡು ರಾಜಿನಾಮೆ; ಕಾರಣ ಗೊತ್ತಾ?

Srinivasamurthy VN

ಹೈದರಾಬಾದ್: ಇತ್ತೀಚೆಗಷ್ಟೇ ವೈಎಸ್ ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಕ್ರಿಕೆಟಿಗ ಅಂಬಾಟಿ ರಾಯುಡು ರಾಜಕೀಯ ಪ್ರವೇಶ ಮಾಡಿದ ಒಂದೇ ವಾರಕ್ಕೆ ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ.

ಲೋಕಸಭಾ ಮತ್ತು ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಕಳೆದ ಡಿಸೆಂಬರ್ 28ರಂದು ಆಂಧ್ರ ಪ್ರದೇಶದ ಆಡಳಿತಾ ರೂಢ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಿದ್ದ ಕ್ರಿಕೆಟಿಗ ಅಂಬಾಟಿ ರಾಯುಡು ಪಕ್ಷ ಸೇರಿದ ಒಂದೇ ವಾರಕ್ಕೆ ಪಕ್ಷ ತೊರೆದಿದ್ದಾರೆ. 

ವಾರದ ಹಿಂದೆಯಷ್ಟೇ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಮ್ಮುಖದಲ್ಲಿ ಅಂಬಾಟಿ ರಾಯುಡು YSRC ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಇದೀಗ ಸಾಮಾಜಿಕ ಜಾಲತಾಣದ ಮೂಲಕ ಪಕ್ಷವನ್ನು ತೊರೆಯುತ್ತಿರುವುದಾಗಿ ಅಂಬಾಟಿ ರಾಯುಡು ತಿಳಿಸಿದ್ದಾರೆ.

ನಾನು ವೈಎಸ್‌ಆರ್‌ಸಿಪಿ ಪಕ್ಷವನ್ನು ತ್ಯಜಿಸಲು ನಿರ್ಧರಿಸಿದ್ದೇನೆ. ಅಲ್ಲದೆ ಸ್ವಲ್ಪ ಸಮಯದವರೆಗೆ ರಾಜಕೀಯದಿಂದ ದೂರವಿರಲು ಬಯಸಿದ್ದೇನೆ ಎಂದು ಈ ಮೂಲಕ ತಿಳಿಯಪಡಿಸುತ್ತೇನೆ. ನನ್ನ ಮುಂದಿನ ನಡೆಯನ್ನು ಸರಿಯಾದ ಸಮಯದಲ್ಲಿ ತಿಳಿಸಲಾಗುವುದು, ಎಲ್ಲರಿಗೂ ಧನ್ಯವಾದಗಳು ಎಂದು ಅಂಬಾಟಿ ರಾಯುಡು ಟ್ವೀಟ್ ಮಾಡಿದ್ದಾರೆ.

ಈ ಹಿಂದಿನಿಂದಲೂ ಆಂಧ್ರ ಸಿಎಂ ಜೊತೆ ಆತ್ಮೀಯತೆ ಹೊಂದಿದ್ದ ಅಂಬಾಟಿ ರಾಯುಡು ನಿರೀಕ್ಷೆಯಂತೆ ವೈಎಸ್​ಆರ್​ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಅಲ್ಲದೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗುಂಟೂರು ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎನ್ನಲಾಗಿತ್ತು. ಆದರ ಅವರ ಈ ದಿಢೀರ್ ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿದೆ.

ಟಿಕೆಟ್ ಅನುಮಾನ ಹಿನ್ನಲೆಯಲ್ಲಿ ರಾಜಿನಾಮೆ
ಮೂಲಗಳ ಪ್ರಕಾರ ಅಂಬಾಟಿ ರಾಯುಡುಗೆ ಮುಂಬವರುವ ಚುನಾವಣೆಯಲ್ಲಿ ಟಿಕೆಟ್ ದೊರೆಯುವುದು ಅನುಮಾನ ಎಂದು ಹೇಳಲಾಗಿತ್ತು. ಅಂಬಾಟಿ ರಾಯುಡು ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಲೋಕಸಭಾ ಟಿಕೆಟ್ ಆಕಾಂಕ್ಷಿಯಾಗಿದ್ದರು. ಇದೇ ಕಾರಣಕ್ಕೇ ಅವರು ವೈಎಸ್ ಆರ್ ಪಕ್ಷ ಸೇರ್ಪಡೆಯಾಗಿದ್ದರು. ಆದರೆ ಅವರಿಗೆ ಟಿಕೆಟ್ ದೊರೆಯುದು ಅನುಮಾನವಾದ ಹಿನ್ನಲೆಯಲ್ಲಿ ಅವರು ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. 

SCROLL FOR NEXT