ದೇಶ

ಲೋಕಸಭೆ ಚುನಾವಣೆ 2024: ಪ್ರಧಾನಿ ಮೋದಿ ಜ.13ರಂದು ಬಿಹಾರದ ಬೆಟ್ಟಿಯಾದಿಂದ ಚುನಾವಣಾ ರ್ಯಾಲಿ ಪ್ರಾರಂಭ ಸಾಧ್ಯತೆ

Sumana Upadhyaya

ನವದೆಹಲಿ: ಲೋಕಸಭೆ ಚುನಾವಣೆ 2024ಕ್ಕೆ ಇನ್ನು ಕೆಲವೇ ತಿಂಗಳು ಬಾಕಿ. ರಾಜಕೀಯ ಪಕ್ಷಗಳಿಂದ ಚಟುವಟಿಕೆಗಳು ಗರಿಗೆದರಿವೆ. ಮುಂಬರುವ ಲೋಕಸಭೆ ಚುನಾವಣೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಿಹಾರದ ಚಂಪರನ್ ನಿಂದ ಜನವರಿ 13ಕ್ಕೆ ಪ್ರಚಾರವನ್ನು ಆರಂಭಿಸುವ ಸಾಧ್ಯತೆಯಿದೆ.

ಬಿಹಾರದ ಚಂಪರನ್ ನ ಬೆಟ್ಟಯ್ಯ ನಗರದಲ್ಲಿರುವ ರಾಮನ್ ಮೈದಾನ್ ನಲ್ಲಿ ಪ್ರಧಾನಿ ಮೋದಿಯವರು ಬರುವ ಜನವರಿ 13ರಂದು ಭಾನುವಾರ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ತಮ್ಮ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ರಸ್ತೆಗಳು, ಸೇತುವೆಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಬಿಹಾರ ರಾಜ್ಯದಲ್ಲಿ 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ತೀವ್ರ ಯೋಜನೆ ಹಾಕಿಕೊಂಡಿದೆ. ಎಲ್ಲಾ 40 ಸೀಟುಗಳನ್ನು ಗೆಲ್ಲುವ ಉತ್ಸುಕತೆಯಲ್ಲಿದೆ. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಬಿಹಾರದಲ್ಲಿ ಜನವರಿ, ಫೆಬ್ರವರಿ ತಿಂಗಳಲ್ಲಿ ಹಲವು ರ್ಯಾಲಿಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪ್ರಮುಖ ರ್ಯಾಲಿಗಳು ಜನವರಿ 15ರ ನಂತರ ನಡೆಯಲಿದೆ.

ಪ್ರಧಾನಿ ಮೋದಿಯವರು ಬೆಗುಸರೈ, ಬೆಟ್ಟಿಯಾ ಮತ್ತು ಔರಂಗಾಬಾದ್ ನಲ್ಲಿ ರ್ಯಾಲಿಯನ್ನುದ್ದೇಶಿ ಮಾತನಾಡಲಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮುಂಬರುವ ಲೋಕಸಭೆ ಚುನಾವಣೆಗೆ ವಿರೋಧ ಪಕ್ಷಗಳನ್ನು ಒಗ್ಗೂಡಿಸುವಲ್ಲಿ ಸಫಲರಾಗಿದ್ದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಹಾರದಲ್ಲಿ ಬಿಜೆಪಿ 39 ಮತ್ತು ಕಾಂಗ್ರೆಸ್ 1 ಸ್ಥಾನವನ್ನು ಗೆದ್ದುಕೊಂಡಿತ್ತು. 

SCROLL FOR NEXT