ಸಾಂದರ್ಭಿಕ ಚಿತ್ರ 
ದೇಶ

ದೇಶದ 12 ರಾಜ್ಯಗಳಲ್ಲಿ 682 JN.1 ಪ್ರಕರಣ ವರದಿ; ನಂ.1 ಸ್ಥಾನದಲ್ಲಿ ಕರ್ನಾಟಕ!

ಕೊರೋನಾ ವೈರಸ್ ರೂಪಾಂತರಿ JN.1 ಮೊದಲ ಪ್ರಕರಣ ಕೇರಳದಲ್ಲಿ ಪತ್ತೆಯಾದ ನಂತರ ದೇಶಾದ್ಯಂತ ಆತಂಕ ಹೆಚ್ಚಾಗತೊಡಗಿದ್ದು, ಕೋವಿಡ್ ಸೋಂಕಿತರ ಜೊತೆಗೆ ರೂಪಾಂತರಿ JN.1 ಪ್ರಕರಣಗಳ ಸಂಖ್ಯೆ 682ಕ್ಕೆ ಏರಿದೆ.

ನವದೆಹಲಿ: ಕೊರೋನಾ ವೈರಸ್ ರೂಪಾಂತರಿ JN.1 ಮೊದಲ ಪ್ರಕರಣ ಕೇರಳದಲ್ಲಿ ಪತ್ತೆಯಾದ ನಂತರ ದೇಶಾದ್ಯಂತ ಆತಂಕ ಹೆಚ್ಚಾಗತೊಡಗಿದ್ದು, ಕೋವಿಡ್ ಸೋಂಕಿತರ ಜೊತೆಗೆ ರೂಪಾಂತರಿ JN.1 ಪ್ರಕರಣಗಳ ಸಂಖ್ಯೆ 682ಕ್ಕೆ ಏರಿದೆ.

ದೇಶದ 12 ರಾಜ್ಯಗಳಲ್ಲಿ 682 ಜೆಎನ್.1 ಪ್ರಕರಣಗಳು ವರದಿಯಾಗಿದ್ದು, ಕರ್ನಾಟಕ 199 ಪ್ರಕರಣಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ಕೇರಳದಿಂದ 148, ಮಹಾರಾಷ್ಟ್ರದಿಂದ 139, ಗೋವಾದಿಂದ 47, ಗುಜರಾತ್‌ನಿಂದ 36, ಆಂಧ್ರಪ್ರದೇಶದಿಂದ 30, ರಾಜಸ್ಥಾನದಿಂದ 30, ತಮಿಳುನಾಡಿನಿಂದ 26, ದೆಹಲಿಯಿಂದ 21, ಒಡಿಶಾದಿಂದ ಮೂರು, ತೆಲಂಗಾಣದಲ್ಲಿ ಎರಡು ಮತ್ತು ಹರಿಯಾಣದಲ್ಲಿ ಒಂದು ಪ್ರಕರಣ ವರದಿಯಾಗಿದೆ ಎಂದು ಸೋಮವಾರ ಅಧಿಕೃತ ಮೂಲಗಳು ತಿಳಿಸಿವೆ.

ದೇಶದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಮತ್ತು JN.1 ರೂಪಾಂತರಿ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ತಕ್ಷಣಕ್ಕೆ ಆತಂಕ ಪಡುವ ಅಗತ್ಯ ಇಲ್ಲ. ಸೋಂಕಿತರಲ್ಲಿ ಹೆಚ್ಚಿನವರು ಮನೆಯಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇದು ಸೌಮ್ಯ ಅನಾರೋಗ್ಯವನ್ನು ಸೂಚಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಧ್ಯೆ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 605 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ನಾಲ್ವರು ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. 

ಇಂದು ಬೆಳಗ್ಗೆ 8 ಗಂಟೆಗೆ ಲಭ್ಯವಾದ ನವೀಕೃತ ಮಾಹಿತಿ ಪ್ರಕಾರ, ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,002 ಕ್ಕೆ ಏರಿದೆ. ದೇಶದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4.5 ಕೋಟಿಗೆ (4,50,18,792) ಏರಿಕೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು, ಭಾರತದಿಂದ ನೆರವು

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video