ಕೋವಿಡ್-19 ಸೋಂಕು ಪತ್ತೆ ಪರೀಕ್ಷೆ 
ದೇಶ

ಕೋವಿಡ್-19: ಕಳೆದ 24 ಗಂಟೆಗಳಲ್ಲಿ 605 ಹೊಸ ಪ್ರಕರಣ, ಕರ್ನಾಟಕದಲ್ಲಿ ಒಬ್ಬರು ಸೇರಿದಂತೆ ನಾಲ್ವರು ಸಾವು

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 605 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ ನಾಲ್ವರು ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ. 

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 605 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ ನಾಲ್ವರು ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ. 

ಮುಂಜಾನೆ 8 ಗಂಟೆಗೆ ಲಭ್ಯವಾದ ನವೀಕೃತ ಮಾಹಿತಿ ಪ್ರಕಾರ, ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,002 ಕ್ಕೆ ಏರಿದೆ. ದೇಶದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4.5 ಕೋಟಿಗೆ (4,50,18,792) ಏರಿಕೆಯಾಗಿದೆ.

ಕೇರಳದಲ್ಲಿ ಇಬ್ಬರು, ಕರ್ನಾಟಕ ಮತ್ತು ತ್ರಿಪುರಾದಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದು, ಈ ಮೂಲಕ ಈವರೆಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 5,33,396ಕ್ಕೆ ಏರಿಕೆಯಾಗಿದೆ. ಸದ್ಯ ಈವರೆಗೆ 4,44,81,341 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. 

ಕೇರಳದಲ್ಲಿ, ದೀರ್ಘಕಾಲದ ಶ್ವಾಸಕೋಶದ ಕಾಯಿಲೆಯಿಂದ (COPD) ಬಳಲುತ್ತಿದ್ದ 70 ವರ್ಷದ ಪುರುಷ ಮತ್ತು T2DM ಮತ್ತು HTN ಹೊಂದಿರುವ 81 ವರ್ಷದ ಪುರುಷ ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ. ಕರ್ನಾಟಕದಲ್ಲಿ CA ಮತ್ತು TB ಹೊಂದಿದ್ದ 48 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ತ್ರಿಪುರಾದಲ್ಲಿ ಇತರೆ ಯಾವುದೇ ರೋಗಗಳಿಲ್ಲದ ಓರ್ವ ವ್ಯಕ್ತಿಯೊಬ್ಬರು ಕೋವಿಡ್‌ಗೆ ಬಲಿಯಾಗಿದ್ದಾರೆ.

ಜನವರಿ 7 ರಂದು ದೇಶದಲ್ಲಿ ಕೋವಿಡ್ ವಿರುದ್ಧದ 11,838 ಲಸಿಕಾ ಡೋಸ್‌ಗಳನ್ನು ನೀಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ವರದಿ ಮಾಡಿದೆ.

ಈಮಧ್ಯೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಕೋವಿಡ್ ಉಪತಳಿ ಜೆಎನ್.1 ಅನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT