ದೇಶ

ಉತ್ತರಾಖಂಡ: ಕ್ಲೋರಿನ್ ಅನಿಲ ಸೋರಿಕೆಯಿಂದ ಜನರಿಗೆ ಉಸಿರಾಟದ ಸಮಸ್ಯೆ; ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ

Ramyashree GN

ಡೆಹ್ರಾಡೂನ್: ಕ್ಲೋರಿನ್ ಅನಿಲ ಸೋರಿಕೆಯಿಂದಾಗಿ ಪ್ರೇಮ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಜಂಜ್ರಾ ಪ್ರದೇಶದ ಜನರಿಗೆ ಉಸಿರಾಟದ ತೊಂದರೆ ಎದುರಾದ ಬಳಿಕ ಮಂಗಳವಾರ ಅಲ್ಲಿನ ನಿವಾಸಿಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಸುರಕ್ಷಿತ ವಿಲೇವಾರಿಗೆ ಕ್ರಮ ಕೈಗೊಳ್ಳುತ್ತಿದ್ದಾರೆ.

ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗಿದೆ, ಯಾವುದೇ ಸಾವು-ನೋವು ವರದಿಯಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಡೆಹ್ರಾಡೂನ್‌ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಅಜಯ್ ಸಿಂಗ್ ಪ್ರಕಾರ, ಘಟನೆ ಬಗ್ಗೆ ಮಾಹಿತಿ ಪಡೆದ ಕೂಡಲೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ಇತರ ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿವೆ ಎಂದಿದ್ದಾರೆ.

ಡೆಹ್ರಾಡೂನ್‌ನ ಪ್ರೇಮ್‌ನಗರ ಪೊಲೀಸ್ ಠಾಣೆಯ ಜಂಜ್ರಾ ಪ್ರದೇಶದ ಖಾಲಿ ಪ್ಲಾಟ್‌ನಲ್ಲಿ ಇರಿಸಲಾಗಿದ್ದ ಕ್ಲೋರಿನ್ ಸಿಲಿಂಡರ್‌ನಲ್ಲಿ ಸೋರಿಕೆಯಾಗಿ ಜನರು ಉಸಿರಾಡಲು ತೊಂದರೆ ಅನುಭವಿಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಯಿತು. ಕೂಡಲೇ ಪೊಲೀಸರು, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಸಿಂಗ್ ಹೇಳಿದರು.

SCROLL FOR NEXT