ಎಎಪಿ ಸಾಂದರ್ಭಿಕ ಚಿತ್ರ 
ದೇಶ

ಲೋಕಸಭೆ ಚುನಾವಣೆ: ಐದು ರಾಜ್ಯಗಳಲ್ಲಿ ಕಾಂಗ್ರೆಸ್ ಜೊತೆ ಮೈತ್ರಿಗೆ ಎಎಪಿ ಸಿದ್ಧ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಂಜಾಬ್ ಸೇರಿದಂತೆ ಐದು ರಾಜ್ಯಗಳಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಆಮ್ ಆದ್ಮಿ ಪಕ್ಷ(ಎಎಪಿ) ಸಿದ್ಧವಾಗಿದೆ. ಆದರೆ ಸೀಟು ಹಂಚಿಕೆಗೆ ಸಂಬಂಧಿಸಿದ ಚರ್ಚೆ ಸಕಾರಾತ್ಮಕವಾಗಿದೆ...

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಂಜಾಬ್ ಸೇರಿದಂತೆ ಐದು ರಾಜ್ಯಗಳಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಆಮ್ ಆದ್ಮಿ ಪಕ್ಷ(ಎಎಪಿ) ಸಿದ್ಧವಾಗಿದೆ. ಆದರೆ ಸೀಟು ಹಂಚಿಕೆಗೆ ಸಂಬಂಧಿಸಿದ ಚರ್ಚೆ ಸಕಾರಾತ್ಮಕವಾಗಿದೆ ಎಂದು ಆಪ್ ದೆಹಲಿ ಸಂಚಾಲಕ ಗೋಪಾಲ್ ರೈ ಅವರು ಮಂಗಳವಾರ ಹೇಳಿದ್ದಾರೆ.

ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಕುರಿತು ಚರ್ಚಿಸಲು ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಎಎಪಿ ಮತ್ತು ಕಾಂಗ್ರೆಸ್ ಸೋಮವಾರ ಚರ್ಚೆ ನಡೆಸಿವೆ.

"ಎರಡೂ ಪಕ್ಷಗಳ ನಡುವೆ(ಸೀಟು ಹಂಚಿಕೆ ಕುರಿತು) ಮಾತುಕತೆ ಪ್ರಾರಂಭವಾಗಿದೆ. ನಾವು ದೆಹಲಿ, ಪಂಜಾಬ್, ಹರಿಯಾಣ, ಗೋವಾ ಮತ್ತು ಗುಜರಾತ್‌ನಲ್ಲಿ ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಳ್ಳುವ ನಮ್ಮ ನಿಲುವಿಗೆ ಬದ್ಧವಾಗಿದ್ದೇವೆ. ಇಲ್ಲಿಯವರೆಗೆ, ಸಕಾರಾತ್ಮಕ ಚರ್ಚೆಗಳು ನಡೆದಿವೆ" ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನಿಮ್ಮ ಪಕ್ಷ ಎಷ್ಟು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ರೈ, ಈ ರಾಜ್ಯಗಳಲ್ಲಿ ನಿರ್ದಿಷ್ಟ ಸ್ಥಾನಗಳ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಎಎಪಿ ನಾಯಕ ಹೇಳಿದ್ದಾರೆ.

"ನಾವು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಲೋಕಸಭೆ ಚುನಾವಣೆ ಎದುರಿಸಲು ಬಯಸುತ್ತೇವೆ. ಮುಂದಿನ ಸಭೆಯಲ್ಲಿ ಸೀಟುಗಳ ಬಗ್ಗೆ ಮಾತುಕತೆ ನಡೆಯಲಿದೆ. ಮೈತ್ರಿಯಲ್ಲಿದ್ದಾಗ ಅಧಿಕೃತ ನಿಲುವು ತೆಗೆದುಕೊಳ್ಳಬೇಕು. ಅದಕ್ಕಾಗಿ ಎರಡೂ ಪಕ್ಷಗಳು ಚರ್ಚಿಸಿ ತಮ್ಮ ಸಿದ್ಧತೆಗಳನ್ನು ಮಾಡಿಕೊಳ್ಳುತ್ತವೆ" ಎಂದು ರೈ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್