ಸಾಂದರ್ಭಿಕ ಚಿತ್ರ 
ದೇಶ

ಮುಂಬೈನಲ್ಲಿ 19 ಮಂದಿಗೆ JN.1 ಪಾಸಿಟಿವ್, ದೇಶದಲ್ಲಿ ರೂಪಾಂತರಿ ಪ್ರಕರಣಗಳ ಸಂಖ್ಯೆ 819ಕ್ಕೆ ಏರಿಕೆ

ಕೊರೋನಾ ವೈರಸ್ ರೂಪಾಂತರಿ JN.1 ಮೊದಲ ಪ್ರಕರಣ ಕೇರಳದಲ್ಲಿ ಪತ್ತೆಯಾದ ನಂತರ ದೇಶಾದ್ಯಂತ ಆತಂಕ ಹೆಚ್ಚಾಗತೊಡಗಿದ್ದು, ಕೋವಿಡ್ ಸೋಂಕಿತರ ಜೊತೆಗೆ ರೂಪಾಂತರಿ JN.1 ಪ್ರಕರಣಗಳ ಸಂಖ್ಯೆ 819ಕ್ಕೆ ಏರಿಕೆಯಾಗಿದೆ....

ನವದೆಹಲಿ: ಕೊರೋನಾ ವೈರಸ್ ರೂಪಾಂತರಿ JN.1 ಮೊದಲ ಪ್ರಕರಣ ಕೇರಳದಲ್ಲಿ ಪತ್ತೆಯಾದ ನಂತರ ದೇಶಾದ್ಯಂತ ಆತಂಕ ಹೆಚ್ಚಾಗತೊಡಗಿದ್ದು, ಕೋವಿಡ್ ಸೋಂಕಿತರ ಜೊತೆಗೆ ರೂಪಾಂತರಿ JN.1 ಪ್ರಕರಣಗಳ ಸಂಖ್ಯೆ 819ಕ್ಕೆ ಏರಿಕೆಯಾಗಿದೆ.

ಮುಂಬೈನಲ್ಲಿ 19 ಮಂದಿಗೆ ಜೆಎನ್.1 ಉಪ-ವೇರಿಯಂಟ್ ಕೊರೋನಾ ವೈರಸ್‌ ಪಾಸಿಟಿವ್ ಬಂದಿದೆ ಎಂದು ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್(ಬಿಎಂಸಿ) ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಇದರೊಂದಿಗೆ ದೇಶದ 12 ರಾಜ್ಯಗಳಲ್ಲಿ 819 ಜೆಎನ್.1 ಪ್ರಕರಣಗಳು ವರದಿಯಾಗಿದ್ದು, ಮಹಾರಾಷ್ಟ್ರ 250  ಪ್ರಕರಣಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ಕರ್ನಾಟಕದಲ್ಲಿ 199, ಕೇರಳದಲ್ಲಿ 148, ಗೋವಾದಲ್ಲಿ 49, ಗುಜರಾತ್‌ನಿಂದ 36, ಆಂಧ್ರಪ್ರದೇಶ ಮತ್ತು ರಾಜಸ್ಥಾನದಿಂದ ತಲಾ 30, ತಮಿಳುನಾಡು ಮತ್ತು ತೆಲಂಗಾಣದಿಂದ ತಲಾ 26, ದೆಹಲಿಯಲ್ಲಿ 21, ಒಡಿಶಾದಲ್ಲಿ ಮೂರು ಮತ್ತು ಹರಿಯಾಣದಲ್ಲಿ ಒಂದು ಪ್ರಕರಣ ವರದಿಯಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ದೇಶದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಮತ್ತು JN.1 ರೂಪಾಂತರಿ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ತಕ್ಷಣಕ್ಕೆ ಆತಂಕ ಪಡುವ ಅಗತ್ಯ ಇಲ್ಲ. ಸೋಂಕಿತರಲ್ಲಿ ಹೆಚ್ಚಿನವರು ಮನೆಯಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇದು ಸೌಮ್ಯ ಅನಾರೋಗ್ಯವನ್ನು ಸೂಚಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!