ಮುಂಬೈ: ಸ್ಥಳೀಯ ಕ್ರಿಕೆಟ್ ಪಂದ್ಯವೊಂದರಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ 52 ವರ್ಷದ ವ್ಯಕ್ತಿಯೊಬ್ಬರ ತಲೆಗೆ ಚೆಂಡು ತಲೆಗೆ ಬಡಿದು ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.
ಜಯೇಶ್ ಚುನ್ನಿಲಾಲ್ ಸಾವ್ಲಾ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಮಾತುಂಗಾ ಪ್ರದೇಶದ ದಾಡ್ಕರ್ ಕ್ರಿಕೆಟ್ ಮೈದಾನದಲ್ಲಿ ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ.
ಮೈದಾನದಲ್ಲಿ ಏಕಕಾಲಕ್ಕೆ ಎರಡು ಪಂದ್ಯಗಳು ನಡೆಯುತ್ತಿದ್ದವು. ಈ ವೇಳೆ ಫೀಲ್ಡಿಂಗ್ ಮಾಡುತ್ತಿದ್ದ ಜಯೇಶ್ ಅವರ ತಲೆಗೆ ಮತ್ತೊಂದು ತಂಡದ ಕಡೆಯವರ ಚೆಂಡು ಬಡಿದಿದೆ. ಕೂಡಲೇ ಜಯೇಶ್ ಅವರು ನೆಲಕ್ಕೆ ಕುಸಿದು ಬಿದ್ದಿದ್ದು, ಪ್ರಜ್ಞಾಹೀನ ಸ್ಥಿತಿಗೆ ಮರಳಿದ್ದಾರೆ.
ಇದನ್ನೂ ಓದಿ: ಅರ್ಜುನ ಪ್ರಶಸ್ತಿ ಪಡೆದ ಟೀಂ ಇಂಡಿಯಾ ವೇಗಿ; ಪ್ರಶಸ್ತಿ ಪಡೆಯುವುದು ನನ್ನ ಕನನಸಾಗಿತ್ತು ಎಂದ ಮೊಹಮ್ಮದ್ ಶಮಿ
ಬಳಿಕ ಸ್ಥಳದಲ್ಲಿದ್ದವರು ಜಯೇಶ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.
ಕಚ್ಚಿ ಸಮುದಾಯ ಟೂರ್ನಮೆಂಟ್ ಆಯೋಜಿಸಿದ್ದು, ಇದರ ಅಂಗವಾಗಿ ಮೈದಾನದಲ್ಲಿ ಪಂದ್ಯಗಳನ್ನು ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಘಟನೆ ಸಂಬಂಧ ಮಾತುಂಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.