ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಇಂಫಾಲ್ ಅರಮನೆ ಮೈದಾನದಿಂದ ಪ್ರಾರಂಭಿಸಲು ಮಣಿಪುರ ಸರ್ಕಾರ ಅನುಮತಿ ನಿರಾಕರಿಸಿದೆ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ.
ಇಂದು ದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಜೈರಾಮ್ ರಮೇಶ್ ಮತ್ತು ಕೆ ಸಿ ವೇಣುಗೋಪಾಲ್ ಅವರು, ಯಾತ್ರೆಯ ಕರಪತ್ರ ಮತ್ತು ವೆಬ್‌ಸೈಟ್ ಅನ್ನು ಬಿಡುಗಡೆ ಮಾಡಿದರು.
ಈ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ವೇಣುಗೋಪಾಲ್, ಇಂಫಾಲದ ಅರಮನೆ ಮೈದಾನದಿಂದ ಭಾರತ್ ಜೋಡೋ ನ್ಯಾಯ್ ಯಾತ್ರೆ ಪ್ರಾರಂಭಿಸಲು ಮಣಿಪುರ ಸರ್ಕಾರ ಅನುಮತಿ ನಿರಾಕರಿಸಿದೆ. ಆದರೆ ಮಣಿಪುರದಿಂದಲೇ ಯಾತ್ರೆ ಆರಂಭಿಸಲು ಕಾಂಗ್ರೆಸ್ ನಿರ್ಧರಿಸಿದೆ. ಹೀಗಾಗಿ ಇಂಫಾಲ್‌ನ ಮತ್ತೊಂದು ಸ್ಥಳದಿಂದ ಯಾತ್ರೆ ಪ್ರಾರಂಭಿಸಲು ಪಕ್ಷ ಅನುಮತಿ ಕೋರಿದೆ ಎಂದು ಹೇಳಿದರು.
ಜನವರಿ 14 ರಂದು ಪ್ರಾರಂಭವಾಗಲಿರುವ ಈ ಯಾತ್ರೆಯು 6,713 ಕಿಲೋಮೀಟರ್ ದೂರ ಕ್ರಮಿಸಲಿದೆ.