ದೇಶ

ಅಫ್ಘಾನಿಸ್ತಾನದಲ್ಲಿ 6.1 ತೀವ್ರತೆಯ ಭೂಕಂಪ, ಉತ್ತರ ಭಾರತದಲ್ಲೂ ಕಂಪಿಸಿದ ಭೂಮಿ

Lingaraj Badiger

ನವದೆಹಲಿ: ಅಫ್ಘಾನಿಸ್ತಾನದಲ್ಲಿ ಗುರುವಾರ 6.1 ತೀವ್ರತೆಯ ಭೂಕಂಪ ಸಂಭವಿಸಿದ್ದು, ಉತ್ತರ ಭಾರತದ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಇಂದು ಮಧ್ಯಾಹ್ನ 2.50ಕ್ಕೆ ಅಫ್ಘಾನಿಸ್ತಾನದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ದಾಖಲಾಗಿದೆ. ಭೂಕಂಪದ ಕೇಂದ್ರಬಿಂದು ಕಾಬೂಲ್‌ನಿಂದ 241 ಕಿಲೋಮೀಟರ್‌ಗಳ ಉತ್ತರ-ಈಶಾನ್ಯದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಹೇಳಿದೆ.

ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ ಭೂಮಿ ಕಂಪಿಸಿದ ಹಾಗೂ ಪೀಠೋಪಕರಣಗಳು ಅಲುಗಾಡಿದ ಅನುಭವ ಆಗಿದ್ದು, ಜನರಲ್ಲಿ ಆತಂಕ ಉಂಟು ಮಾಡಿದೆ.

ನೆರೆಯ ಪಾಕಿಸ್ತಾನದಲ್ಲೂ ಭೂಕಂಪದ ಅನುಭವವಾಗಿದ್ದು, ಅಫ್ಘಾನಿಸ್ತಾನದ ಹಿಂದೂ ಖುಷ್ ವಲಯದಲ್ಲಿ ಕಂಪನದ ಕೇಂದ್ರ ಬಿಂದು ಇದೆ ಎಂದು ಅಲ್ಲಿನ ಹವಾಮಾನ ಇಲಾಖೆ ತಿಳಿಸಿದೆ.

SCROLL FOR NEXT