ವಿಪಕ್ಷ ನಾಯಕರು 
ದೇಶ

ಪ್ರತಿಪಕ್ಷಗಳ ಮೈತ್ರಿಕೂಟ INDIAಗೆ ಸಂಚಾಲಕರ ನೇಮಕ ಕುರಿತು ನಾಳೆ ನಿರ್ಧಾರ ಸಾಧ್ಯತೆ

ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾದ ಉನ್ನತ ನಾಯಕರು ಜನವರಿ 13 ರಂದು ವರ್ಚುವಲ್ ಮೂಲಕ ಸಭೆ ನಡೆಸುತ್ತಿದ್ದು, ಸಭೆಯಲ್ಲಿ ಮೈತ್ರಿಯನ್ನು ಬಲಪಡಿಸುವ ಬಗ್ಗೆ, ಸೀಟು ಹಂಚಿಕೆ ಕುರಿತು ಮತ್ತು ಸಂಚಾಲಕರನ್ನು ನೇಮಕ ಮಾಡುವ...

ನವದೆಹಲಿ: ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾದ ಉನ್ನತ ನಾಯಕರು ಜನವರಿ 13 ರಂದು ವರ್ಚುವಲ್ ಮೂಲಕ ಸಭೆ ನಡೆಸುತ್ತಿದ್ದು, ಸಭೆಯಲ್ಲಿ ಮೈತ್ರಿಯನ್ನು ಬಲಪಡಿಸುವ ಬಗ್ಗೆ, ಸೀಟು ಹಂಚಿಕೆ ಕುರಿತು ಮತ್ತು ಸಂಚಾಲಕರನ್ನು ನೇಮಕ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.

ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಅವರು ಶನಿವಾರ ಬೆಳಗ್ಗೆ ನಡೆಯುವ ವರ್ಚುವಲ್ ಸಭೆಯಲ್ಲಿ ಭಾಗವಹಿಸುವುದಿಲ್ಲ. ಏಕೆಂದರೆ ಅವರು ಪೂರ್ವನಿಗದಿತ ಕಾರ್ಯಕ್ರಮಗಳನ್ನು ಭಾಗವಹಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಸಂಚಾಲಕರನ್ನು ನೇಮಿಸುವ ಕುರಿತು ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಜೆಡಿಯು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಸಂಚಾಲಕರನ್ನಾಗಿ ಮಾಡಲು ಬಯಸುತ್ತಿದೆ. ಆದರೆ ಇದನ್ನು ತೃಣಮೂಲ ಕಾಂಗ್ರೆಸ್ ವಿರೋಧಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಇಂದು ಸಂಜೆ ನಾಳಿನ ವರ್ಚುವಲ್ ಸಭೆಯ ಬಗ್ಗೆ ಪಕ್ಷಗಳಿಗೆ ತಿಳಿಸಲಾಗಿದೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಕೆಲವು ಪೂರ್ವ ನಿಗದಿತ ಕಾರ್ಯಕ್ರಮಗಳಿರುವುದರಿಂದ ಅವರು ಹಾಜರಾಗದಿರಬಹುದು ಎಂದು ಟಿಎಂಸಿ ಮೂಲಗಳು ತಿಳಿಸಿವೆ.

ಇಂಡಿಯಾ ಮೈತ್ರಿಕೂಟ, ಭಾರತೀಯ ಜನತಾ ಪಕ್ಷವನ್ನು ಸೋಲಿಸಲು ಬದ್ಧವಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಸಂಚಾಲಕ ನೇಮಕ ಸೇರಿದಂತೆ ಹಲವು ಸಮಸ್ಯೆಗಳು ಮೈತ್ರಿಕೂಟದಲ್ಲಿ ಇನ್ನೂ ಬಗೆಹರಿಯಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ 'ದಾದಾ ಸಾಹೇಬ್ ಫಾಲ್ಕೆ' ಪ್ರಶಸ್ತಿ ಪ್ರಕಟ! ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ

CBFC ಪುನಾರಚನೆ: ಸುನಿಲ್ ಶೆಟ್ಟಿ, ಪ್ರೀತಿ ಜಿಂಟಾ, ರಿಕಿ ಕೇಜ್ ಸೇರಿದಂತೆ 18 ಸದಸ್ಯರ ಆಯ್ಕೆ!

‘ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದ್ರೂ ನಂಬದ ಅನಂತ್ ನಾಗ್; ‘ಸುಳ್ಳು ಸುದ್ದಿ’ ಎಂದು ನಕ್ಕಿ ಮಲಗಿದ್ರು’

ಬಿಸಿಸಿಐನಿಂದ WPL 2027ರ ವೇಳಾಪಟ್ಟಿ ಪ್ರಕಟ: ಇದೇ ಅಕ್ಟೋಬರ್‌ನಲ್ಲಿ ಹರಾಜು ಪ್ರಕ್ರಿಯೆ

ಯುದ್ಧದ ಕಿಡಿ ಹೊತ್ತಿಸಲು ಬಂದಿತ್ತಾ ಪಾಕ್ ನೌಕಾಪಡೆ ಹಡಗು? ಭಾರತೀಯ ಕ್ಯಾಪ್ಟನ್ ಚಾಣಾಕ್ಷತನದಿಂದ ತಪ್ಪಿದ ಭಾರೀ ದುರಂತ!