ದೇಶ

ರಾಮ ಮಂದಿರ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ಮುರ್ಮುಗೆ ಆಹ್ವಾನ: ವಿಹೆಚ್ ಪಿ

Srinivas Rao BV

ನವದೆಹಲಿ: ರಾಮ ಮಂದಿರ ಟ್ರಸ್ಟ್ ನ ನಿಯೋಗ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಗೆ ಜ.22 ರ ಕಾರ್ಯಕ್ರಮಕ್ಕೆ ಅಧಿಕೃತ ಆಹ್ವಾನ ನೀಡಿದೆ. 

ವಿಹೆಚ್ ಪಿಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಾಯಕ ರಾಮ್ ಲಾಲ್ ಹಾಗೂ ರಾಮ ಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ವಿಹೆಚ್ ಪಿ ನಿಯೋಗದಲ್ಲಿದ್ದರು.
 
ಜನವರಿ 22 ರಂದು ಶ್ರೀರಾಮ ಮಂದಿರದಲ್ಲಿ ನಡೆಯುವ ರಾಮ ಲಲ್ಲಾ ಪ್ರತಿಷ್ಠಾಪನೆ ಸಮಾರಂಭಕ್ಕೆ ಇಂದು ಭಾರತದ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಲಾಗಿದೆ ಎಂದು ವಿಎಚ್‌ಪಿ ರಾಷ್ಟ್ರೀಯ ವಕ್ತಾರ ವಿನೋದ್ ಬನ್ಸಾಲ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅಧ್ಯಕ್ಷ ಮುರ್ಮು ನಿಯೋಗದಿಂದ ಆಹ್ವಾನವನ್ನು ಸ್ವೀಕರಿಸುತ್ತಿರುವ ಚಿತ್ರವನ್ನು ಅವರು ಪೋಸ್ಟ್ ಮಾಡಿದ್ದಾರೆ. "ರಾಷ್ಟ್ರಪತಿಗಳು ಈ ಬಗ್ಗೆ ಅಪಾರ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಶೀಘ್ರದಲ್ಲೇ ಬಂದು ಅಯೋಧ್ಯೆಗೆ ಭೇಟಿ ನೀಡುವ ಸಮಯವನ್ನು ನಿರ್ಧರಿಸುವುದಾಗಿ ಹೇಳಿದರು," ಬನ್ಸಾಲ್ ತಿಳಿಸಿದ್ದಾರೆ.

SCROLL FOR NEXT