ಅರವಿಂದ ಕೇಜ್ರಿವಾಲ್ 
ದೇಶ

ಅಬಕಾರಿ ಹಗರಣ: ದೆಹಲಿ ಸಿಎಂ ಕೇಜ್ರಿವಾಲ್‌ಗೆ 4ನೇ ಬಾರಿ ಇಡಿ ಸಮನ್ಸ್ ಜಾರಿ

ಈಗ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ನಾಲ್ಕನೇ ಬಾರಿ ಸಮನ್ಸ್ ಜಾರಿ...

ನವದೆಹಲಿ: ಈಗ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ನಾಲ್ಕನೇ ಬಾರಿ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕೃತ ಮೂಲಗಳು ಶನಿವಾರ ತಿಳಿಸಿವೆ.
  
ಆಮ್ ಆದ್ಮಿ ಪಕ್ಷದ(ಎಎಪಿ) ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್ ಅವರಿಗೆ ಜನವರಿ 18 ರಂದು ಇಡಿ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

55 ವರ್ಷದ ಕೇಜ್ರಿವಾಲ್ ಅವರು ಜನವರಿ 3 ರಂದು ಇಡಿ ಮುಂದೆ ಮೂರನೇ ಬಾರಿ ವಿಚಾರಣೆಗೆ ಹಾಜರಾಗಲು ನಿರಾಕರಿಸಿದ್ದರು. 

ಈ ಹಿಂದೆ 2023 ರ ನವೆಂಬರ್ 2 ರಂದು ಮತ್ತು ಡಿಸೆಂಬರ್ 21 ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿಗೆ ಇಡಿ ಸಮನ್ಸ್ ಜಾರಿ ಮಾಡಿತ್ತು. ಆದರೆ ವಿಚಾರಣೆಗೆ ಗೈರು ಆಗಿದ್ದ ಕೇಜ್ರಿವಾಲ್ ಅವರು ತಮಗೆ ನೀಡಿರುವ ನೋಟಿಸ್ ಕಾನೂನು ಬಾಹಿರ ಎಂದು ಲಿಖಿತ ಉತ್ತರ ಕಳುಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ