ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಪಿಒಕೆಗೆ ಯುಕೆ ರಾಯಭಾರಿ ಭೇಟಿ: ಭಾರತ ತೀವ್ರ ಆಕ್ರೋಶ

ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ (ಪಿಒಕೆ) ಇಸ್ಲಾಮಾಬಾದ್‌ನಲ್ಲಿರುವ ಯುಕೆ ಹೈ ಕಮಿಷನರ್ ಹಾಗೂ ಮತ್ತೋರ್ವ ಬ್ರಿಟಿಷ್ ಅಧಿಕಾರಿಯ ಭೇಟಿಯ ಬಗ್ಗೆ ಭಾರತ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಇಸ್ಲಾಮಾಬಾದ್ ನಲ್ಲಿರುವ ಯುಕೆ ರಾಯಭಾರಿ
Nagaraja AB
Updated On : 13 Jan 2024, 7:43 pm

ನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ (ಪಿಒಕೆ) ಇಸ್ಲಾಮಾಬಾದ್‌ನಲ್ಲಿರುವ ಯುಕೆ ಹೈ ಕಮಿಷನರ್ ಹಾಗೂ ಮತ್ತೋರ್ವ ಬ್ರಿಟಿಷ್ ಅಧಿಕಾರಿಯ ಭೇಟಿಯ ಬಗ್ಗೆ ಭಾರತ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಭಾರತದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯ ಇಂತಹ ಉಲ್ಲಂಘನೆ ಸ್ವೀಕಾರಾರ್ಹವಲ್ಲ' ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

ಇದನ್ನೂ ಓದಿ: ಪಾಕ್ ಸೇನೆಯಿಂದ PoK ಯ ಶಾರದಾ ಮಂದಿರ ಅತಿಕ್ರಮಣ; ತೆರವಿಗೆ ಕೇಂದ್ರ ಸರ್ಕಾರದ ಸಹಾಯ ಕೋರಿದ ಸಮಿತಿ

'ಜನವರಿ 10 ರಂದು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಇಸ್ಲಾಮಾಬಾದ್‌ನಲ್ಲಿರುವ ಬ್ರಿಟಿಷ್ ಹೈಕಮಿಷನರ್, ಯುಕೆ ವಿದೇಶಾಂಗ ಕಚೇರಿಯ ಅಧಿಕಾರಿಯೊಂದಿಗಿನ ಆಕ್ಷೇಪಾರ್ಹ ಭೇಟಿಯನ್ನು ಭಾರತ ಗಂಭೀರವಾಗಿ ಪರಿಗಣಿಸಿದೆ ಎಂದು ಅದು ಹೇಳಿದೆ. ಈ ಉಲ್ಲಂಘನೆ ಕುರಿತು ವಿದೇಶಾಂಗ ಕಾರ್ಯದರ್ಶಿ ಭಾರತದಲ್ಲಿರುವ ಬ್ರಿಟಿಷ್ ಹೈಕಮಿಷನರ್‌ಗೆ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ ಎಂದು ಎಂಇಎ ಹೇಳಿದೆ.

Advertisement

Advertisement

'ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳು ಯಾವಾಗಲೂ ಭಾರತದ ಅವಿಭಾಜ್ಯ ಅಂಗವಾಗಿಯೇ ಉಳಿಯುತ್ತವೆ' ಎಂದು ಹೇಳಿಕೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments