ನಿತೀಶ್ ಕುಮಾರ್ 
ದೇಶ

INDIA ಸಂಚಾಲಕ ಹುದ್ದೆಗೆ ನಿತೀಶ್ ಹೆಸರು ಪ್ರಸ್ತಾಪ, ಆದರೆ..

ಸಂಚಾಲಕ ಹುದ್ದೆಗೆ ನಿತೀಶ್ ಕುಮಾರ್ ಹೆಸರನ್ನು ಪ್ರಸ್ತಾಪವಾಗಿತ್ತು ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಆಪ್ತ ಮಾಹಿತಿ ನೀಡಿದ್ದಾರೆ.

ನವದೆಹಲಿ: ಸಂಚಾಲಕ ಹುದ್ದೆಗೆ ನಿತೀಶ್ ಕುಮಾರ್ ಹೆಸರನ್ನು ಪ್ರಸ್ತಾಪವಾಗಿತ್ತು ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಆಪ್ತ ಮಾಹಿತಿ ನೀಡಿದ್ದಾರೆ.
 
ವರ್ಚ್ಯುಯಲ್ ಮೋಡ್ ನಲ್ಲಿ ನಡೆದ ಮೈತ್ರಿಕೂಟದ ಸಭೆಯಲ್ಲಿ ನಿತೀಶ್ ಕುಮಾರ್ ಅವರ ಹೆಸರನ್ನು ಸಂಚಾಲಕ ಹುದ್ದೆಗೆ ಪ್ರಸ್ತಾಪ ಮಾಡಲಾಗಿತ್ತು ಆದರೂ ಈ ಪ್ರಸ್ತಾವನೆಗೆ ನಿತೀಶ್ ಕುಮಾರ್ ಇನ್ನೂ ಒಪ್ಪಿಗೆ ಸೂಚಿಸಿಲ್ಲ ಎಂದು ಜೆಡಿಯು ಪ್ರಧಾನ ಕಾರ್ಯದರ್ಶಿ ಸಂಜಯ್ ಕುಮಾರ್ ಝಾ ತಿಳಿಸಿದ್ದಾರೆ.

ಜೆಡಿ-ಯು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂಜಯ್ ಕುಮಾರ್ ಝಾ ಅವರು, ಬಿಹಾರ ಸಿಎಂ ಕಾಂಗ್ರೆಸ್ ನಾಯಕರೊಬ್ಬರ ಪರವಾಗಿದ್ದಾರೆ ಎಂದು ಹೇಳಿದ್ದಾರೆ.

"ಹೌದು, ಪ್ರಸ್ತಾಪವಿತ್ತು " ಎಂದು ಮೈತ್ರಿಕೂಟದ ಎಲ್ಲಾ ಸಭೆಗಳಿಗೆ ಕುಮಾರ್ ಅವರೊಂದಿಗೆ ಬಂದಿರುವ ಝಾ, ಮುಖ್ಯಮಂತ್ರಿಗಳ ನಿವಾಸದ ಹೊರಗೆ ಪತ್ರಕರ್ತರು ಪ್ರಶ್ನೆಗಳೊಂದಿಗೆ ಅವರನ್ನು ಸಂಪರ್ಕಿಸಿದಾಗ ಹೇಳಿದರು. ಪ್ರಸ್ತಾವನೆಗೆ ಸಿಎಂ ಇದುವರೆಗೂ ಒಪ್ಪಿಗೆ ನೀಡಿಲ್ಲ, ‘ಪಕ್ಷದಲ್ಲಿ ಚರ್ಚಿಸಿದ ನಂತರ ತಿಳಿಸುತ್ತೇವೆ’ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇತ್ತೀಚೆಗೆ ರಚಿಸಲಾದ ಮೈತ್ರಿಕೂಟದ ಅಧ್ಯಕ್ಷರನ್ನಾಗಿ ಮಾಡುವ ತಾತ್ವಿಕ ನಿರ್ಧಾರದ ಬಗ್ಗೆ ಕುಮಾರ್ ಅಸಮಾಧಾನಗೊಂಡಿದ್ದಾರೆ ಎಂಬ ಸುದ್ದಿಗಳನ್ನು ಜೆಡಿ-ಯು ನಾಯಕ ತಳ್ಳಿಹಾಕಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel