ರಾಹುಲ್ ಗಾಂಧಿ 
ದೇಶ

ರಾಹುಲ್ ಗಾಂಧಿಯ ಭಾರತ್ ಜೋಡೋ ನ್ಯಾಯ ಯಾತ್ರೆ ಜ.14 ರಿಂದ ಆರಂಭ

ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆ ಜ.14 ರಿಂದ ಮಣಿಪುರ ಆರಂಭವಾಗಲಿದೆ ಎಂದು ಕಾಂಗ್ರೆಸ್ ಹೇಳಿದೆ. 

ನವದೆಹಲಿ: ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆ ಜ.14 ರಿಂದ ಮಣಿಪುರ ಆರಂಭವಾಗಲಿದೆ ಎಂದು ಕಾಂಗ್ರೆಸ್ ಹೇಳಿದೆ. 

ಇದು ರಾಜಕೀಯ ರ್ಯಾಲಿ ಆಗಿದ್ದು ಚುನಾವಣೆಗೆ ಸಂಬಂಧ ಇಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ. ಈ ಬಗ್ಗೆ ಮಣಿಪುರದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಭಾರತ್ ಜೋಡೋ ನ್ಯಾಯ ಯಾತ್ರೆ, ಭಾರತ್ ಜೋಡೋ ಯಾತ್ರೆಯ ಎರಡನೇ ಹಂತದ್ದಾಗಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಆಡಳಿತವಿರುವ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಕಾಂಗ್ರೆಸ್ ನಾಯಕರ ದಂಡು ಯಾತ್ರೆಯ ಪ್ರಾರಂಭದಲ್ಲಿ ಭಾಗವಹಿಸಲಿದೆ ಎಂದು ತಿಳಿಸಿದ್ದಾರೆ. 

“ಇದು ಸೈದ್ಧಾಂತಿಕ ಯಾತ್ರೆ, ಚುನಾವಣಾ ಯಾತ್ರೆಯಲ್ಲ. ಇದೊಂದು ರಾಜಕೀಯ ರ್ಯಾಲಿಯಾಗಿದ್ದು, ರಾಜಕೀಯ ಉದ್ದೇಶದಿಂದ ರಾಜಕೀಯ ಪಕ್ಷವೊಂದು ನಡೆಸುತ್ತಿದೆ. ಸಂವಿಧಾನ, ಸಂವಿಧಾನದ ಪೀಠಿಕೆ, ತತ್ವಗಳು-ನ್ಯಾಯ, ಸ್ವಾತಂತ್ರ್ಯ ಸಮಾನತೆ ಮತ್ತು ಭ್ರಾತೃತ್ವವನ್ನು ರಕ್ಷಿಸುವುದು ನಮ್ಮ ರಾಜಕೀಯ ಉದ್ದೇಶವಾಗಿದೆ ಎಂದು ರಮೇಶ್ ಹೇಳಿದ್ದಾರೆ. 

ಯಾತ್ರೆಯ ಆರಂಭಿಕ ಹಂತವಾಗಿ ಮಣಿಪುರವನ್ನು ಉದ್ದೇಶಪೂರ್ವಕ ಆಯ್ಕೆಯಾಗಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ. ಕಾಂಗ್ರೆಸ್ ವಿವಿಧ ಆಯ್ಕೆಗಳನ್ನು ಪರಿಗಣಿಸಿದೆ ಮತ್ತು ಅಂತಿಮವಾಗಿ, “ಇಲ್ಲಿ ಏನಾಯಿತು ಎಂಬುದರ ಬಗ್ಗೆ ನಮ್ಮ ಕಾಳಜಿಯ ಪ್ರತಿಬಿಂಬವಾಗಿ ಮಣಿಪುರದಿಂದ ಪ್ರಾರಂಭಿಸಲು ನಿರ್ಧರಿಸಿದೆ ಎಂದು ಜೈರಾಮ್ ರಮೇಶ್ ತಿಳಿಸಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿ ಮಣಿಪುರದ ಯಾವುದೇ ರಾಜಕೀಯ ನಾಯಕರನ್ನು ಭೇಟಿ ಮಾಡಿಲ್ಲ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Basmati ಅಕ್ಕಿ ಭಾರತಕ್ಕೆ ಮಾತ್ರ ಸೀಮಿತವಲ್ಲ: ವಿಶೇಷ ಟ್ರೇಡ್‌ಮಾರ್ಕ್ ನೀಡಲು ಆಸ್ಟ್ರೇಲಿಯಾ ಕೋರ್ಟ್ ನಕಾರ, ರಫ್ತುದಾರರಲ್ಲಿ ಹೆಚ್ಚಿದ ಆತಂಕ

ತಮಿಳುನಾಡಿನಲ್ಲಿ ಸಿಎಂ ವಿಜಯ್ ಬಂಪರ್ ಘೋಷಣೆ: ವರ್ಷಕ್ಕೆ 3 ಉಚಿತ LPG ಸಿಲಿಂಡರ್; ಮಹಿಳೆಯರ ಉಚಿತ ಬಸ್ ಪ್ರಯಾಣ ವಿಸ್ತರಣೆ, ಪರಂದೂರು ವಿಮಾನ ನಿಲ್ದಾಣಕ್ಕೆ ಬ್ರೇಕ್..!

ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ: ಆಗಸ್ಟ್.31ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ವಾಲ್ಮೀಕಿ ನಿಗಮ ಹಗರಣ: ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ BJP ಬೃಹತ್ ಪ್ರತಿಭಟನೆ, ಅಶೋಕ್-ವಿಜಯೇಂದ್ರ ಸೇರಿ ಹಲವರು ಪೊಲೀಸರ ವಶಕ್ಕೆ..!

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!