ಡಾ. ಪ್ರಭಾ ಅತ್ರೆ 
ದೇಶ

ಖ್ಯಾತ ಹಿಂದೂಸ್ತಾನಿ ಗಾಯಕಿ ಡಾ. ಪ್ರಭಾ ಅತ್ರೆ ಹೃದಯಾಘಾತದಿಂದ ನಿಧನ

ಖ್ಯಾತ ಹಿಂದೂಸ್ತಾನಿ ಗಾಯಕಿ ಡಾ. ಪ್ರಭಾ ಅತ್ರೆ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ  92 ವರ್ಷ ವಯಸ್ಸಾಗಿತ್ತು. ಇಂದು ಬೆಳಗ್ಗೆ ಪುಣೆಯಲ್ಲಿರುವ ಅವರ ನಿವಾಸದಲ್ಲಿ ವಿಧಿವಶರಾಗಿದ್ದಾರೆ.

ಖ್ಯಾತ ಹಿಂದೂಸ್ತಾನಿ ಗಾಯಕಿ ಡಾ. ಪ್ರಭಾ ಅತ್ರೆ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ  92 ವರ್ಷ ವಯಸ್ಸಾಗಿತ್ತು. ಇಂದು ಬೆಳಗ್ಗೆ ಪುಣೆಯಲ್ಲಿರುವ ಅವರ ನಿವಾಸದಲ್ಲಿ ವಿಧಿವಶರಾಗಿದ್ದಾರೆ.

ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಕಿರಾನಾ ಘರಾನಾವನ್ನು ಪ್ರತಿನಿಧಿಸಿದ ಅತ್ರೆ ಅವರು ಭಾರತ ಸರ್ಕಾರದಿಂದ ಎಲ್ಲಾ ಮೂರು ಪದ್ಮ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ನಿದ್ರಿಸುವಾಗಲೇ  ಹೃದಯಾಘಾತವಾಗಿದೆ. ಅವರನ್ನು ನಗರದ ಕೊತ್ರುಡ್ ಪ್ರದೇಶದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಬೆಳಿಗ್ಗೆ 5.30 ಕ್ಕೆ ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು.

ಅತ್ರೆ, 1932ರ ಸೆಪ್ಟೆಂಬರ್ 13ರಂದು ಜನಿಸಿದರು. ಕಾನೂನು ಪದವೀಧರರಾಗಿದ್ದ ಅವರು ಸಂಗೀತದಲ್ಲಿ ಡಾಕ್ಟರೇಟ್ ಪಡೆದಿದ್ದರು. ಬಹುಮುಖಿ ವ್ಯಕ್ತಿತ್ವದ ಅತ್ರೆ ಶಾಸ್ತ್ರೀಯ ಗಾಯಕಿ ಮಾತ್ರವಲ್ಲದೇ, ಶಿಕ್ಷಣತಜ್ಞೆಯಾಗಿ, ಸಂಶೋಧಕಿಯಾಗಿ, ಲೇಖಕಿಯಾಗಿ ಗುರುತಿಸಿಕೊಂಡಿದ್ದರು. 1990ರಲ್ಲಿ ಪದ್ಮಶ್ರೀ, 2002ರಲ್ಲಿ ಪದ್ಮಭೂಷಣ ಹಾಗೂ 2022ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಅವರನ್ನು ಗೌರವಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

ಬೇಕಾದರೆ ನನ್ನ ವಿರುದ್ಧವೂ ಫಾರ್ಮ್‌ - 7 ಸಲ್ಲಿಸಿ: ಕಾಂಗ್ರೆಸ್'ಗೆ BJP ಸಂಸದ ಯದುವೀರ್ ಒಡೆಯರ್ ಸವಾಲು

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು