ಸಂಗ್ರಹ ಚಿತ್ರ 
ದೇಶ

ನಾಯಿಗಳ ಹಾವಳಿ ಹೆಚ್ಚಳ: ಏಳು ತಿಂಗಳ ಮಗುವನ್ನು ಕಚ್ಚಿ ಕೊಂದ ಬೀದಿ ನಾಯಿಗಳು!

ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ಏಳು ತಿಂಗಳ ಬಾಲಕನನ್ನು ಬೀದಿ ನಾಯಿಗಳ ಹಿಂಡು ಕಚ್ಚಿ ಕೊಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭೋಪಾಲ್‌: ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ಏಳು ತಿಂಗಳ ಬಾಲಕನನ್ನು ಬೀದಿ ನಾಯಿಗಳ ಹಿಂಡು ಕಚ್ಚಿ ಕೊಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಯೋಧ್ಯಾ ನಗರ ಪ್ರದೇಶದಲ್ಲಿ ನಡೆದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಘಟನೆ ಬೆಳಕಿಗೆ ಬಂದಿದ್ದು ಈ ಸಂಬಂಧ ಪೊಲೀಸರು ಮತ್ತು ಆಡಳಿತದ ಗಮನಕ್ಕೆ ತರಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾಯಿಗಳ ದಾಳಿಯಿಂದ ಮಗು ಮೃತಪಟ್ಟ ದಿನವೇ ಮನೆಯವರು ಹೂತಿಟ್ಟಿದ್ದ ಮಗುವಿನ ಶವವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಶನಿವಾರ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ಅವರು ಹೇಳಿದರು.

ಮಗುವಿನ ಪೋಷಕರು ದಿನಗೂಲಿ ಕೆಲಸ ಮಾಡುತ್ತಿದ್ದರು. ಅಯೋಧ್ಯಾ ನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮಹೇಶ್ ನಿಲ್ಹಾರೆ ಅವರು ಘಟನೆಗೆ ಮುನ್ನ ಮಗುವಿನ ತಾಯಿ ತನಗೆ ಹತ್ತಿರದಲ್ಲಿ ಸ್ವಲ್ಪ ಕೆಲಸವಿದೆ ಎಂದು ಮಗುವನ್ನು ನೆಲದ ಮೇಲೆ ಮಲಗಿಸಿದ್ದರು. ಹೀಗಾಗಿ ನಾಯಿಗಳ ದಂಡು ಮಗುವನ್ನು ಕಚ್ಚಿ ಎಳೆದೊಯ್ದಿದೆ ಎಂದು ಅವರು ಹೇಳಿದರು.

ಅಕ್ಕಪಕ್ಕದ ಜನರು ಈ ಭೀಕರ ಘಟನೆಯನ್ನು ನೋಡಿ ಕೂಗಾಡಿದ್ದಾರೆ. ಆದರೆ ಅಷ್ಟರಲ್ಲಿ ನಾಯಿಗಳು ಮಗುವಿನ ಒಂದು ಕೈಯನ್ನು ಕಚ್ಚಿದ್ದವು. ಅಲ್ಲದೆ ಮಗುವಿನ ದೇಹವನ್ನು ಕಚ್ಚಿ ಎಳೆದಾಡಿದ್ದರಿಂದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಗುಣಾ ಜಿಲ್ಲೆಯವರಾದ ಮಗುವಿನ ಪೋಷಕರು ಭೋಪಾಲ್ ಬಳಿಯ ಹಳ್ಳಿಯೊಂದರಲ್ಲಿ ಶವವನ್ನು ಸಮಾಧಿ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಿದ್ದಾರೆ.

ಏತನ್ಮಧ್ಯೆ, ಜಿಲ್ಲಾಡಳಿತವು ಬಾಲಕನ ಕುಟುಂಬಕ್ಕೆ 50,000 ರೂಪಾಯಿ ಆರ್ಥಿಕ ಸಹಾಯವನ್ನು ನೀಡಿದ್ದು, ಇನ್ನೂ 50,000 ರೂಪಾಯಿಗಳನ್ನು ಶೀಘ್ರದಲ್ಲೇ ವಿತರಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭೋಪಾಲ್ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಅಯೋಧ್ಯಾ ನಗರ ಪ್ರದೇಶದಿಂದ ಎಂಟು ಬೀದಿ ನಾಯಿಗಳನ್ನು ಹಿಡಿದಿದೆ. ಅಲ್ಲದೆ ಬೀದಿ ನಾಯಿಗಳನ್ನು ಹಿಡಿಯುವ ಅಭಿಯಾನವನ್ನು ಪ್ರಾರಂಭಿಸಲು ಜಿಲ್ಲಾಧಿಕಾರಿಗಳು ನಾಗರಿಕ ಸಂಸ್ಥೆಯನ್ನು ಕೋರಿದ್ದಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT