ಶಿವಸೇನಾ ಸೇರಿದ ಕಾಂಗ್ರೆಸ್ ಮಾಜಿ ನಾಯಕ ಮಿಲಿಂದ್ ದಿಯೋರಾ 
ದೇಶ

ಮಹಾರಾಷ್ಟ್ರ: ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸೇರಿದ ಕಾಂಗ್ರೆಸ್ ಮಾಜಿ ನಾಯಕ ಮಿಲಿಂದ್ ದಿಯೋರಾ!

ಕಾಂಗ್ರೆಸ್ ಜೊತೆಗೆ ಮುನಿಸಿಕೊಂಡು ಭಾನುವಾರ ಬೆಳಗ್ಗೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಕೇಂದ್ರದ ಮಾಜಿ ಸಚಿವ ಮಿಲಿಂದ್ ದಿಯೋರಾ,  ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಬಣಕ್ಕೆ ಸೇರ್ಪಡೆಯಾಗಿದ್ದಾರೆ.

ಮುಂಬೈ: ಕಾಂಗ್ರೆಸ್ ಜೊತೆಗೆ ಮುನಿಸಿಕೊಂಡು ಭಾನುವಾರ ಬೆಳಗ್ಗೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಕೇಂದ್ರದ ಮಾಜಿ ಸಚಿವ ಮಿಲಿಂದ್ ದಿಯೋರಾ,  ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಬಣಕ್ಕೆ ಸೇರ್ಪಡೆಯಾಗಿದ್ದಾರೆ.

ದಕ್ಷಿಣ ಮುಂಬೈ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ದಿಯೋರಾ ಮಧ್ಯಾಹ್ನ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ವರ್ಷಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಡಳಿತ ಪಕ್ಷಕ್ಕೆ ಸೇರಿದರು.

ಶಿವಸೇನೆ ಸೇರ್ಪಡೆಯಾದ ನಂತರ ಮಾತನಾಡಿದ ದಿಯೋರಾ, "ಇದು ನನಗೆ ತುಂಬಾ ಭಾವನಾತ್ಮಕ ದಿನವಾಗಿದೆ. ಕಾಂಗ್ರೆಸ್ ತೊರೆಯುತ್ತೇನೆ ಎಂದು ಎಂದಿಗೂ ಯೋಚಿಸಿರಲಿಲ್ಲ.  ಆದರೆ, ಇಂದು ಶಿವಸೇನೆಗೆ ಸೇರಿದ್ದೇನೆ ಎಂದು ಹೇಳಿದರು. ಇದಕ್ಕೂ ಮುನ್ನಾ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ದಿಯೋರಾ, ಕಾಂಗ್ರೆಸ್‌ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು.

ಇಂದು ನನ್ನ ರಾಜಕೀಯ ಪಯಣದಲ್ಲಿ ಮಹತ್ವದ ಅಧ್ಯಾಯ ಮುಕ್ತಾಯವಾಗಿದೆ. ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ, ಪಕ್ಷದೊಂದಿಗೆ ನನ್ನ ಕುಟುಂಬದ 55 ವರ್ಷಗಳ ಸಂಬಂಧವನ್ನು ಕೊನೆಗೊಳಿಸಿದ್ದೇನೆ. ಇಷ್ಟು ವರ್ಷಗಳಲ್ಲಿ ನೀಡಿದ ಬೆಂಬಲಕ್ಕಾಗಿ ಅವರ ಎಲ್ಲಾ ನಾಯಕರು, ಸಹೋದ್ಯೋಗಿಗಳು ಮತ್ತು ಕಾರ್ಯಕರ್ತರಿಗೆ  ಆಭಾರಿಯಾಗಿದ್ದೇನೆ ಎಂದು ಟ್ವೀಟ್ ನಲ್ಲಿ ಹೇಳಿದ್ದರು. 

ದಿಯೋರಾ ಅವರು ಈ ಹಿಂದೆ ಪ್ರತಿನಿಧಿಸಿದ್ದ ದಕ್ಷಿಣ ಮುಂಬೈ ಲೋಕಸಭಾ ಸ್ಥಾನದಿಂದ ಸ್ಪರ್ಧಿಸುವುದಾಗಿ ಶಿವಸೇನೆ-ಯುಬಿಟಿ ಹೇಳಿದ  ಕಳೆದ ಕೆಲವು ದಿನಗಳಿಂದ ದಿಯೋರಾ ಅಸಮಾಧಾನಗೊಂಡಿದ್ದರು. 2014 ಮತ್ತು 2019 ರ ಲೋಕಸಭಾ ಚುನಾವಣೆಯಲ್ಲಿ ಅವರು ಅವಿಭಜಿತ ಶಿವಸೇನೆಯ ಅರವಿಂದ್ ಸಾವಂತ್ ಅವರಿಂದ ಸೋತಿದ್ದರು. ಈಗ ವಿರೋಧ ಪಕ್ಷಗಳ ಮೈತ್ರಿಕೂಟವಾದ ಮಹಾ ವಿಕಾಸ್ ಅಘಾಡಿ ವೇದಿಕೆಯಲ್ಲಿ ಕಾಂಗ್ರೆಸ್ ಮತ್ತು ಎನ್ ಸಿಪಿ ಶರದ್ ಪವಾರ್ ಬಣ ಮೈತ್ರಿ ಮಾಡಿಕೊಂಡಿವೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!