ಮಿಲಿಂದ್ ದಿಯೋರಾ 
ದೇಶ

ಕಾಂಗ್ರೆಸ್ ಜೊತೆಗಿನ 55 ವರ್ಷಗಳ ಸಂಬಂಧ ಮುರಿದುಕೊಂಡ ಮಿಲಿಂದ್ ಡಿಯೋರಾ; ಪಕ್ಷ ತೊರೆದ ಬಳಿಕ ಹೇಳಿದ್ದೇನು?

ಹಿರಿಯ ಕಾಂಗ್ರೆಸ್ ನಾಯಕ ಮಿಲಿಂದ್ ದಿಯೋರಾ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಭಾನುವಾರ ಘೋಷಿಸಿದ್ದಾರೆ. ಇಂದು ಮಧ್ಯಾಹ್ನ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಮುಂಬೈ: ಹಿರಿಯ ಕಾಂಗ್ರೆಸ್ ನಾಯಕ ಮಿಲಿಂದ್ ದಿಯೋರಾ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಭಾನುವಾರ ಘೋಷಿಸಿದ್ದಾರೆ.

ಇಂದು ಮಧ್ಯಾಹ್ನ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಹಿರಿಯ ನಾಯಕ ಮುರಳಿ ದಿಯೋರಾ ಅವರ ಪುತ್ರ ಮಿಲಿಂದ್, ತಮ್ಮ ರಾಜೀನಾಮೆಯನ್ನು ದೃಢಪಡಿಸಿದ್ದಾರೆ ಮತ್ತು 'ಇಂದು ನನ್ನ ರಾಜಕೀಯ ಪಯಣದಲ್ಲಿ ಮಹತ್ವದ ಅಧ್ಯಾಯವೊಂದರ ಮುಕ್ತಾಯವನ್ನು ಸೂಚಿಸುತ್ತದೆ. ನಾನು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದೇನೆ. ಈ ಮೂಲಕ ಪಕ್ಷದೊಂದಿಗಿನ ನಮ್ಮ ಕುಟುಂಬದ 55 ವರ್ಷಗಳ ಸಂಬಂಧ ಕೊನೆಗೊಂಡಿದೆ' ಎಂದಿದ್ದಾರೆ.

'ಇಷ್ಟು ವರ್ಷ ನನಗೆ ಬೆಂಬಲ ನೀಡಿದ ಎಲ್ಲಾ ನಾಯಕರು, ಸಹೋದ್ಯೋಗಿಗಳು ಮತ್ತು ಕಾರ್ಯಕರ್ತರಿಗೆ ನಾನು ಕೃತಜ್ಞನಾಗಿದ್ದೇನೆ' ಎಂದು ಅವರು ಹೇಳಿದರು.

ಮಿಲಿಂದ್ ದಿಯೋರಾ ಅವರು 2012 ರಿಂದ 2014 ರವರೆಗೆ ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಕೇಂದ್ರದ ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಮತ್ತು ಶಿಪ್ಪಿಂಗ್ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಅವರು ಮುಂಬೈ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷರೂ ಆಗಿದ್ದಾರೆ. ದಿಯೋರಾ ಅವರು ಈ ಹಿಂದೆ ಪ್ರತಿನಿಧಿಸಿದ್ದ ಮುಂಬೈ ದಕ್ಷಿಣ ಲೋಕಸಭಾ ಕ್ಷೇತ್ರವನ್ನು ಶಿವಸೇನೆ (ಯುಬಿಟಿ) ಹಕ್ಕು ಸಾಧಿಸಿರುವ ಬಗ್ಗೆಯೂ ಅವರು ಅಸಮಾಧಾನ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಒಡಿಶಾದ SCB ವೈದ್ಯಕೀಯ ಕಾಲೇಜಿನಲ್ಲಿ ಭಾರೀ ಅಗ್ನಿ ಅವಘಡ: ಕನಿಷ್ಠ 10 ಮಂದಿ ಸಾವು, ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ

West Asia conflict: ಕುವೈತ್ ಸೇನಾ ತಾಣದ ಮೇಲೆ ಡ್ರೋನ್ ದಾಳಿ; ಯುದ್ಧದಲ್ಲಿ ಹಸ್ತಕ್ಷೇಪ ಮಾಡದಿರಿ- ಇತರೆ ರಾಷ್ಟ್ರಗಳಿಗೆ ಇರಾನ್ ಖಡಕ್ ಎಚ್ಚರಿಕೆ

ಒಡಿಶಾ ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ 'ಕೈ'ಶಾಸಕರು, ಬಿಡದಿ ರೆಸಾರ್ಟ್‌ನಿಂದ ಬೆಂಗಳೂರಿಗೆ ಶಿಫ್ಟ್..!

ಬಿಜೆಪಿಯಿಂದ ಆಪರೇಷನ್ ಕಮಲ ಯತ್ನ: ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ: ಡಿ.ಕೆ ಶಿವಕುಮಾರ್

ಇರಾನ್ ಯುದ್ಧ ವಿರಾಮ ಬಗ್ಗೆ ಮಾತುಕತೆ ನಡೆಸಲು ಸಿದ್ಧವಾಗಿದೆ, ಆದರೆ ಈ ಹಂತದಲ್ಲಿ ನಾವು ತಯಾರಿಲ್ಲ: Donald Trump

SCROLL FOR NEXT