ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 272 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ

ಇಂದು ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 272 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,990ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ನವದೆಹಲಿ: ಇಂದು ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 272 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,990ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ನವೀಕೃತ ಮಾಹಿತಿ ಪ್ರಕಾರ, ಇದೇ ಅವಧಿಯಲ್ಲಿ ದೇಶದಲ್ಲಿ ಸಾವಿನ ಪ್ರಕರಣಗಳು ವರದಿಯಾಗಿಲ್ಲ.

2020ರ ಕೊನೆಯಲ್ಲಿ ಪತ್ತೆಯಾದ ಕೋವಿಡ್ ಸಾಂಕ್ರಾಮಿಕ ದೇಶದಲ್ಲಿ ಮೂರು ಅಲೆಗಳನ್ನು ಸೃಷ್ಟಿಸಿದೆ. ಕಳೆದ ನಾಲ್ಕು ವರ್ಷಳಳಿಂದ ಇಲ್ಲಿಯವರೆಗೆ ಒಟ್ಟು 4.5 ಕೋಟಿ ಮಂದಿಗೆ ಸೋಂಕು ತಗುಲಿದೆ. ಈಪೈಕಿ 4.4 ಕೋಟಿ ಮಂದಿ ಈವರೆಗೆ ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.81ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ಸಚಿವಾಲಯದ ವೆಬ್‌ಸೈಟಿನಲ್ಲಿ ನೀಡಿರುವ ಮಾಹಿತಿ ಪ್ರಕಾರ, ದೇಶದಲ್ಲಿ ಇದುವರೆಗೆ 220.67 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT