ದೇಶ

ಅಯೋಧ್ಯೆ: ನಾಳೆಯಿಂದ ಜ.22ರವರೆಗೆ ರೈಲು ಸಂಚಾರದಲ್ಲಿ ವ್ಯತ್ಯಯ!

Nagaraja AB

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರಾಣ ಪ್ರತಿಷ್ಠಾನ ಸಮಾರಂಭ ಅಂಗವಾಗಿ ಹಳಿ ದ್ವಿಗುಣ ಹಾಗೂ ವಿದ್ಯುದ್ದೀಕರಣ ವನ್ನು ಆದ್ಯತೆ ಮೇಲೆ ಕೈಗೊಂಡಿರುವುದಾಗಿ ಜನವರಿ 16 ರಿಂದ 22 ರವರೆಗೆ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಆಗಲಿದೆ ಎಂದು ರೈಲ್ವೆಯ ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ವಂದೇ ಭಾರತ್ ಸೇರಿದಂತೆ ಹತ್ತು ರೈಲುಗಳನ್ನು ರದ್ದುಗೊಳಿಸಲಾಗಿದ್ದು, ಡೂನ್ ಎಕ್ಸ್‌ಪ್ರೆಸ್ ಸೇರಿದಂತೆ 35 ರೈಲುಗಳು ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲಿವೆ. ಇನ್ನು 14 ರೈಲುಗಳ ಸಂಚಾರಕ್ಕೂ ತೊಂದರೆಯಾಗಲಿದೆ.

ಕಾಮಗಾರಿ ಪ್ರಗತಿಯಲ್ಲಿರುವ ಕಾರಣ ಅಯೋಧ್ಯೆಯ ಕ್ಯಾಂಟ್‌ನಿಂದ ಆನಂದ್ ವಿಹಾರ್ ನಡುವೆ ಸಂಚರಿಸುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ನ್ನುಇಂದಿನವರೆಗೂ ರದ್ದುಗೊಳಿಸಲಾಗಿತ್ತು. ಈಗ ಮತ್ತೆ ಜನವರಿ 22ರವರೆಗೆ ವಿಸ್ತರಿಸಲಾಗಿದೆ ಎಂದು ಉತ್ತರ ರೈಲ್ವೆಯ ಲಕ್ನೋ ವಿಭಾಗದ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕಿ ರೇಖಾ ಶರ್ಮಾ ತಿಳಿಸಿದ್ದಾರೆ. 

ರಾಮ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕಾಗಿ ಆದ್ಯತೆಯ ಮೇಲೆ ಹಳಿ ದಿಗ್ವುಣ ಹಾಗೂ ವಿದ್ಯುದೀಕರಣ ಕೈಗೊಳ್ಳಲಾಗಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

SCROLL FOR NEXT