ರಾಹುಲ್ ನಾರ್ವೇಕರ್ - ಏಕನಾಥ್ ಶಿಂಧೆ 
ದೇಶ

ಶಾಸಕರ ಅನರ್ಹತೆ ಪ್ರಕರಣ: ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್‌ಗೆ ಬಾಂಬೆ ಹೈಕೋರ್ಟ್ ನೋಟಿಸ್

ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಮತ್ತು ಉದ್ಧವ್ ಠಾಕ್ರೆ ಗುಂಪಿನ 14 ಶಾಸಕರಿಗೆ ನೋಟಿಸ್ ಜಾರಿ ಮಾಡಿದೆ.

ಮುಂಬೈ: ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಮತ್ತು ಉದ್ಧವ್ ಠಾಕ್ರೆ ಗುಂಪಿನ 14 ಶಾಸಕರಿಗೆ ನೋಟಿಸ್ ಜಾರಿ ಮಾಡಿದೆ.

ಶಾಸಕರನ್ನು ಅನರ್ಹಗೊಳಿಸದ ನಾರ್ವೇಕರ್ ಅವರ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಗಿರೀಶ್ ಕುಲಕರ್ಣಿ ಮತ್ತು ಫಿರ್ದೋಶ್ ಪೂನಿವಾಲಾ ಅವರ ವಿಭಾಗೀಯ ಪೀಠ, ಮಹಾರಾಷ್ಟ್ರ ಶಾಸಕಾಂಗ ಸಚಿವಾಲಯಕ್ಕೆ ನೋಟಿಸ್ ಜಾರಿ ಮಾಡಿದೆ ಮತ್ತು ಅರ್ಜಿಗೆ ತಮ್ಮ ಅಫಿಡವಿಟ್‌ಗಳನ್ನು ಸಲ್ಲಿಸುವಂತೆ ಎಲ್ಲಾ ಪ್ರತಿವಾದಿಗಳಿಗೆ ಸೂಚಿಸಿದೆ.

ವಿಭಾಗೀಯ ಪೀಠ ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 8ಕ್ಕೆ ಮುಂದೂಡಿದೆ.

ಠಾಕ್ರೆ ಬಣದ 14 ಶಾಸಕರ ಅನರ್ಹತೆ ಕೋರಿ ತಾವು ಸಲ್ಲಿಸಿದ್ದ ಅರ್ಜಿಯನ್ನು ಜನವರಿ 10 ರಂದು ಸ್ಪೀಕರ್ ನಾರ್ವೇಕರ್ ಅವರು ವಜಾಗೊಳಿಸಿದ್ದು, ಈ ಆದೇಶವನ್ನು ಪ್ರಶ್ನಿಸಿ ಶಿಂಧೆ ನೇತೃತ್ವದ ಶಿವಸೇನೆಯ ಮುಖ್ಯ ಸಚೇತಕ ಭರತ್ ಗೊಗವಾಲೆ ಅವರು ಅರ್ಜಿ ಸಲ್ಲಿಸಿದ್ದಾರೆ.

ಸ್ಪೀಕರ್ ಆದೇಶ ಕಾನೂನು ಬಾಹಿರ ಎಂದು ಘೋಷಿಸಬೇಕು ಮತ್ತು ಅವರ ಆದೇಶವನ್ನು ರದ್ದುಗೊಳಿಸಿ, ಠಾಕ್ರೆ ಗುಂಪಿನ ಎಲ್ಲಾ 14 ಶಾಸಕರನ್ನು ಅನರ್ಹಗೊಳಿಸುವಂತೆ ಗೋಗಾವಾಲೆ ಅವರು ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!