ಶರದ್ ಪವಾರ್ 
ದೇಶ

ರಾಮ ಮಂದಿರ ನಿರ್ಮಾಣ ಪೂರ್ಣಗೊಂಡ ನಂತರ ಅಯೋಧ್ಯೆಗೆ ಹೋಗುತ್ತೇನೆ: ಆಹ್ವಾನ ತಿರಸ್ಕರಿಸಿದ ಶರದ್ ಪವಾರ್

ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡ ನಂತರ ಅಯೋಧ್ಯೆಗೆ ಭೇಟಿ ನೀಡಿ ಶ್ರೀರಾಮನಿಗೆ ಪ್ರಾರ್ಥನೆ ಸಲ್ಲಿಸುತ್ತೇನೆ ಎಂದು ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ಬುಧವಾರ ಹೇಳಿದ್ದಾರೆ.

ಮುಂಬೈ: ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡ ನಂತರ ಅಯೋಧ್ಯೆಗೆ ಭೇಟಿ ನೀಡಿ ಶ್ರೀರಾಮನಿಗೆ ಪ್ರಾರ್ಥನೆ ಸಲ್ಲಿಸುತ್ತೇನೆ ಎಂದು ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ಬುಧವಾರ ಹೇಳಿದ್ದಾರೆ.

ಈ ಸಂಬಂಧ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರಿಗೆ ಪತ್ರ ಬರೆದಿರುವ ಶರದ್ ಪವಾರ್ ಅವರು, ಜನವರಿ 22 ರಂದು ದೇವಸ್ಥಾನದಲ್ಲಿ ನಡೆಯುವ ರಾಮಲಲ್ಲಾ 'ಪ್ರಾಣ ಪ್ರತಿಷ್ಠಾಪನೆ' ಸಮಾರಂಭದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಿದ್ದಕ್ಕೆ ಧನ್ಯವಾದ ಅರ್ಪಿಸುತ್ತೇನೆ. ಆದರೆ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.

ಮರ್ಯಾದಾ ಪುರಷೋತ್ತಮ ಶ್ರೀರಾಮನು ನಂಬಿಕೆ ಮತ್ತು ಭಕ್ತಿಯ ಪ್ರತೀಕ. ರಾಮಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಾರೆ ಎಂದಿದ್ದಾರೆ.

ಜನವರಿ 22ರ ನಂತರ ರಾಮಲಲ್ಲಾನ ದರ್ಶನ ಸುಲಭವಾಗಲಿದೆ. ಮುಂದಿನ ದಿನಗಳಲ್ಲಿ ನಾನು ಅಯೋಧ್ಯೆಗೆ ಭೇಟಿ ನೀಡಿ, ರಾಮ್ ಲಲ್ಲಾಗೆ ಪ್ರಾರ್ಥನೆ ಸಲ್ಲಿಸುತ್ತೇನೆ. ಅಷ್ಟರೊಳಗೆ ಮಂದಿರ ನಿರ್ಮಾಣವೂ ಪೂರ್ಣಗೊಳ್ಳಲಿದೆ ಎಂದು ಎನ್ ಸಿಪಿ ಮುಖ್ಯಸ್ಥರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!