ನಟ ಸುಮನ್ 
ದೇಶ

ಪ್ರಧಾನಿ ಮೋದಿ, ಸಿಎಂ ಯೋಗಿ ಆದಿತ್ಯನಾಥ್ ರಾಮ, ಲಕ್ಷ್ಮಣ ಇದ್ದಂತೆ: ನಟ ಸುಮನ್

ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಮ, ಲಕ್ಷ್ಮಣ ಇದ್ದಂತೆ ಎಂದು ಬಹುಭಾಷಾ ನಟ ಸುಮನ್ ಹೇಳಿದ್ದಾರೆ.

ಅಯೋಧ್ಯೆ: ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಮ, ಲಕ್ಷ್ಮಣ ಇದ್ದಂತೆ ಎಂದು ಬಹುಭಾಷಾ ನಟ ಸುಮನ್ ಹೇಳಿದ್ದಾರೆ.

ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಅತಿಥಿಯಾಗಿ ಪಾಲ್ಗೊಂಡು, ಸುದ್ದಿಗಾರರೊಂದಿಗೆ ಮಾತನಾಡಿದ 'ಗಬ್ಬರ್ ಈಸ್ ಬ್ಯಾಕ್ ನಟ ಸುಮನ್, ರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಅಭಿನಂದಿಸಿದ್ದಾರೆ.

ಇವರಿಬ್ಬರು ರಾಮ ಮತ್ತು ಲಕ್ಷ್ಮಣರಂತೆ. ಈ ದೇವಾಲಯವನ್ನು ಇಲ್ಲಿಗೆ ಬರುವಂತೆ ಮಾಡಿದ್ದಾರೆ. ಇದು ದೇವರ ಕೆಲಸವಾಗಿದೆ ಎಂದು ಭಾವಿಸುತ್ತೇನೆ. ಈ ದೇವಾಲಯ ನಿರ್ಮಿಸಲು ಅವರನ್ನು ದೇವರೇ ಸೃಷ್ಟಿಸಿದ್ದಾನೆ. ಇದು ಭಾರತದ ರಾಷ್ಟ್ರೀಯ ಸ್ಮಾರಕವಾಗಲಿದೆ ಎಂದರು. 

ಅವರಲ್ಲದೆ, ರಜನಿಕಾಂತ್, ಚಿರಂಜೀವಿ, ರಾಮ್ ಚರಣ್, ಮಾಧುರಿ ದೀಕ್ಷಿತ್ ನೇನೆ, ವಿಕ್ಕಿ ಕೌಶಲ್, ಕತ್ರಿನಾ ಕೈಫ್, ಆಯುಷ್ಮಾನ್ ಖುರಾನಾ, ರಣಬೀರ್ ಕಪೂರ್, ಆಲಿಯಾ ಭಟ್, ಅಮಿತಾಬ್ ಬಚ್ಚನ್, ಅಭಿಷೇಕ್ ಬಚ್ಚನ್, ಕಂಗನಾ ರಣಾವತ್ ಮತ್ತು ಅನುಪಮ್ ಖೇರ್ ಮತ್ತಿತರರು ಸಮಾರಂಭದಲ್ಲಿ ಪಾಲ್ಗೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT