ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ನಂತರ ಇಂದಿನಿಂದ ಸಾರ್ಜನಿಕರಿಗೆ ಉಚಿತ ಅವಕಾಶ ಕಲ್ಪಿಸಲಾಗಿದ್ದು, ವಿಶೇಷ ಪೂಜೆ ಹಾಗೂ ಬಾಲರಾಮನ ದರ್ಶನಕ್ಕೆ ಭಕ್ತರ ದಂಡೇ ಹರಿದುಬರ್ತಿದೆ.
ಇದನ್ನೂ ಓದಿ: 500 ವರ್ಷಗಳ ಕಾಯುವಿಕೆ ಅಂತ್ಯ: ಉದ್ಘಾಟನೆಯಾಯ್ತು ಅಯೋಧ್ಯೆ ರಾಮಮಂದಿರ, ರಾಮ ಲಲ್ಲಾ ವಿಗ್ರಹಕ್ಕೆ ಪ್ರಾಣಪ್ರತಿಷ್ಠಾಪನೆ
ಮುಂಜಾನೆ 3 ಗಂಟೆಯಿಂದಲೇ ಭಕ್ತರು ಗುಂಪು ಗುಂಪಾಗಿ ಆಗಮಿಸುತ್ತಿದ್ದು, ದೇವಾಲಯದ ಆವರಣದಲ್ಲಿ ನೂಕು ನುಗ್ಗಲು ಉಂಟಾಗಿದೆ. ಕೇಸರಿ ಧ್ವಜ ಹಾಗೂ ಉಡುಪಿನೊಂದಿಗೆ ಭಕ್ತರು ದಂಡು ದಂಡಾಗಿ ಆಗಮಿಸುತ್ತಿದ್ದು, ಜೈಶ್ರೀರಾಮ್ ಘೋಷಣೆ ಕೂಗಿ ಸಂಭ್ರಮಿಸುತ್ತಿದ್ದಾರೆ.
500 ವರ್ಷಗಳ ನಂತರ ತನ್ನ ಜನ್ಮಭೂಮಿಯಲ್ಲಿ ನೆಲೆಸಿದ ಆದರ್ಶಪುರುಷ ರಾಮನ ದರ್ಶನಕ್ಕಾಗಿ ದೇಶದ ವಿವಿಧ ಕಡೆಗಳಿಂದ ಅಪಾರ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ.