ಕಾಂಗ್ರೆಸ್ ಕಾರ್ಯಕರ್ತರನ್ನು ತಡೆಯುತ್ತಿರುವ ಪೊಲೀಸರು 
ದೇಶ

ಬ್ಯಾರಿಕೇಡ್‌ಗಳನ್ನು ಮುರಿಯಲು ಪ್ರಚೋದನೆ; ರಾಹುಲ್ ವಿರುದ್ಧ ಪ್ರಕರಣ ದಾಖಲಿಸಲು ಡಿಜಿಪಿಗೆ ಸೂಚನೆ: ಅಸ್ಸಾಂ ಸಿಎಂ

ಬ್ಯಾರಿಕೇಡ್ ಗಳನ್ನು ಮುರಿಯುವುದಕ್ಕೆ ಜನಸ್ತೋಮಕ್ಕೆ ಪ್ರಚೋದನೆ ನೀಡಿದ್ದಕ್ಕಾಗಿ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸುವುದಕ್ಕೆ ಡಿಜಿಪಿ ಜಿಪಿ ಸಿಂಗ್ ಅವರಿಗೆ ಸೂಚನೆ ನೀಡಲಾಗಿದೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮ ಹೇಳಿದ್ದಾರೆ. 

ಗುವಾಹಟಿ: ಬ್ಯಾರಿಕೇಡ್ ಗಳನ್ನು ಮುರಿಯುವುದಕ್ಕೆ ಜನಸ್ತೋಮಕ್ಕೆ ಪ್ರಚೋದನೆ ನೀಡಿದ್ದಕ್ಕಾಗಿ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸುವುದಕ್ಕೆ ಡಿಜಿಪಿ ಜಿಪಿ ಸಿಂಗ್ ಅವರಿಗೆ ಸೂಚನೆ ನೀಡಲಾಗಿದೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮ ಹೇಳಿದ್ದಾರೆ. 

ಕಾಂಗ್ರೆಸ್ ನ ಯುವ ಘಟಕದ ಅಧ್ಯಕ್ಷ ಶ್ರೀನಿವಾಸ್ ಅವರ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಹಿಮಂತ ಬಿಸ್ವ ಶರ್ಮ ಈ ಮಾಹಿತಿ ಹಮ್ಮಿಕೊಂಡಿದ್ದಾರೆ. 

ಶ್ರೀನಿವಾಸ್ ಅವರ ಹ್ಯಾಂಡಲ್ ನಲ್ಲಿದ್ದ ವೀಡಿಯೋಗಳನ್ನು ಸಾಕ್ಷ್ಯವನ್ನಾಗಿ ಬಳಕೆ ಮಾಡಿಕೊಳ್ಳಲಾಗುತ್ತದೆ ಎಂದು ಹಿಮಂತ ಬಿಸ್ವ ಶರ್ಮ ಹೇಳಿದ್ದಾರೆ.

ಇವು ಅಸ್ಸಾಮಿ ಸಂಸ್ಕೃತಿಯ ಭಾಗವಲ್ಲ. ನಮ್ಮದು ಶಾಂತಿಯುತ ರಾಜ್ಯ. ಇಂತಹ ನಕ್ಸಲೀಯ ತಂತ್ರಗಳು ನಮ್ಮ ಸಂಸ್ಕೃತಿಗೆ ಸಂಪೂರ್ಣವಾಗಿ ಪರಕೀಯವಾಗಿವೆ ಎಂದು ಮುಖ್ಯಮಂತ್ರಿ, ರಾಹುಲ್ ಗಾಂಧಿ ಭಾರತ್ ಜೋಡೋ ನ್ಯಾಯ್ ಯಾತ್ರೆಯ ವೇಳೆ ಉಂಟಾದ ಘರ್ಷಣೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. 

'ನಿಮ್ಮ ಅಶಿಸ್ತಿನ ನಡವಳಿಕೆ ಮತ್ತು ಒಪ್ಪಿಗೆ ಸೂಚಿಸಿದ ಮಾರ್ಗಸೂಚಿಗಳ ಉಲ್ಲಂಘನೆಯು ಈಗ ಗುವಾಹಟಿಯಲ್ಲಿ ಭಾರಿ ಟ್ರಾಫಿಕ್ ಜಾಮ್‌ಗೆ ಕಾರಣವಾಗಿದೆ' ಎಂದು ಹಿಮಂತ ಬಿಸ್ವ ಶರ್ಮಾ ಹೇಳಿದ್ದಾರೆ.

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಮಂಗಳವಾರ ನಗರಕ್ಕೆ ಪ್ರವೇಶಿಸದಂತೆ ತಡೆಯಲಾಯಿತು, ಬ್ಯಾರಿಕೇಡ್‌ಗಳನ್ನು ಮುರಿದು ಘೋಷಣೆಗಳನ್ನು ಕೂಗಿದ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯನ್ನು ಪ್ರಚೋದಿಸಿದರು. ನಂತರ ನಗರದ ಹೊರವಲಯದಲ್ಲಿ ಪಕ್ಷದ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಗಾಂಧಿ, "ನಾವು ಬ್ಯಾರಿಕೇಡ್‌ಗಳನ್ನು ಮುರಿದಿದ್ದೇವೆ, ಆದರೆ ಕಾನೂನನ್ನು ಮುರಿಯುವುದಿಲ್ಲ" ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT