ಅಸ್ಸಾಂನ ಗುವಾಹಟಿಯಲ್ಲಿ ಭಾರತ್ ನ್ಯಾಯ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ 
ದೇಶ

ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ರಾಹುಲ್ ಗಾಂಧಿ ಭದ್ರತೆ ಬಗ್ಗೆ ಕಳವಳ: ಅಮಿತ್ ಶಾಗೆ ಖರ್ಗೆ ಪತ್ರ

ಅಸ್ಸಾಂನಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆ ಪೊಲೀಸರು ಮತ್ತು ಕಾಂಗ್ರೆಸ್​ ಸಂಸದ ರಾಹುಲ್ ಗಾಂಧಿ ಹಾಗೂ ಇತರ ಕಾಂಗ್ರೆಸ್ ನಾಯಕರು, ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದು ರಾಹುಲ್ ಗಾಂಧಿ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮ ಕೇಸು ಕೂಡ ದಾಖಲಿಸಿದ್ದಾರೆ.

ನವದೆಹಲಿ: ಅಸ್ಸಾಂನಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆ ಪೊಲೀಸರು ಮತ್ತು ಕಾಂಗ್ರೆಸ್​ ಸಂಸದ ರಾಹುಲ್ ಗಾಂಧಿ ಹಾಗೂ ಇತರ ಕಾಂಗ್ರೆಸ್ ನಾಯಕರು, ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದು ರಾಹುಲ್ ಗಾಂಧಿ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮ ಕೇಸು ಕೂಡ ದಾಖಲಿಸಿದ್ದಾರೆ.

ಯಾತ್ರೆ ಮಧ್ಯೆ ರಾಹುಲ್ ಗಾಂಧಿಯವರಿಗೆ ಭದ್ರತಾ ಲೋಪಗಳ ಬಗ್ಗೆ ಕಳವಳ ವ್ಯಕ್ತಪಡಿಸಿ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಗೃಹ ಸಚಿವ ಅಮಿತ್​ ಶಾಗೆ ಪತ್ರ ಬರೆದಿದ್ದಾರೆ. ರಾಜ್ಯಸಭೆಯ ವಿರೋಧಪಕ್ಷ ನಾಯಕರೂ ಆಗಿರುವ ಖರ್ಗೆ ಅವರು ನಿನ್ನೆ ಮಂಗಳವಾರ ರಾತ್ರಿ ಬರೆದ ಪತ್ರದಲ್ಲಿ ರಾಹುಲ್ ಗಾಂಧಿಯವರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಜನವರಿ 22ರಂದು ನಾಗಾಂವ್​ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರು ರಾಹುಲ್ ಗಾಂಧಿ ಬೆಂಗಾವಲು ಪಡೆಗೆ ಅಡ್ಡಿಪಡಿಸಿದರು ಎಂದು ಪತ್ರದಲ್ಲಿ ಬರೆದಿದ್ದಾರೆ.

ಅಸ್ಸಾಂ ಪೊಲೀಸರು ಮೂಕ ಪ್ರೇಕ್ಷಕರಾಗಿದ್ದಾರೆ. ಕೆಲವೊಮ್ಮೆ ಕಾರ್ಯಕರ್ತರ ಬೆಂಗಾವಲು ವಾಹನವನ್ನು ಪ್ರವೇಶಿಸಲು ಅವಕಾಶ ಮಾಡಿಕೊಟ್ಟಿದ್ದಾರೆ. ಹೀಗಾಗಿ ರಾಹುಲ್ ಗಾಂಧಿ ಭದ್ರತೆಗೆ ಅಪಾಯವಿದೆ ಎಂದಿದ್ದಾರೆ. ಶಾ ಮಧ್ಯಪ್ರವೇಶಿಸಿ ರಾಹುಲ್ ಗಾಂಧಿ ಹಾಗೂ ಯಾತ್ರೆಯಲ್ಲಿ ಭಾಗವಹಿಸುವವರ ಸುರಕ್ಷತೆಯನ್ನು ಖಾತ್ರಿಪಡಿಸುವಂತೆ ಪತ್ರದಲ್ಲಿ ಒತ್ತಾಯಿಸಿದ್ದಾರೆ. 

ಭಾರತ್ ಜೋಡೋ ನ್ಯಾಯ ಯಾತ್ರೆಯು ಜನವರಿ 14 ರಂದು ಮಣಿಪುರದ ಇಂಫಾಲ್‌ನಿಂದ ಪ್ರಾರಂಭವಾಗಿ ಮುಂಬೈನಲ್ಲಿ ಕೊನೆಗೊಳ್ಳುವ ಈ ಯಾತ್ರೆ 6,700 ಕಿಲೋಮೀಟರ್‌ಗಳನ್ನು ಕ್ರಮಿಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ

Nepal Floods: ಭೀಕರ ಪ್ರವಾಹದಲ್ಲಿ 30 ದೇಶಗಳ ನಾಗರೀಕರು ನಾಪತ್ತೆ, ಅಮೆರಿಕದವರೇ ಅತಿ ಹೆಚ್ಚು!