ಸಿಎಂ ಮಮತಾ ಬ್ಯಾನರ್ಜಿ 
ದೇಶ

ಲೋಕ ಸಮರಕ್ಕೂ ಮೊದಲೇ 'ಇಂಡಿಯಾ' ಒಕ್ಕೂಟದ ಮೈತ್ರಿ ಠುಸ್; ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ: ಮಮತಾ ಬ್ಯಾನರ್ಜಿ ಘೋಷಣೆ

ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಭಾರಿ ಹಿನ್ನಡೆಯಾಗಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ.

ಕೊಲ್ಕೋತಾ: ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಭಾರಿ ಹಿನ್ನಡೆಯಾಗಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ.

ಇಂಡಿಯಾ ಮೈತ್ರಿಕೂಟದ ಪ್ರಮುಖ ಪಕ್ಷವಾದ ಕಾಂಗ್ರೆಸ್ ನೊಂದಿಗಿನ ಸೀಟು ಹಂಚಿಕೆ ಮಾತುಕತೆಯು ವಿಫಲಗೊಂಡಿರುವುದರಿಂದ ಮಮತಾ ಬ್ಯಾನರ್ಜಿ ಮಹತ್ವದ ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ನಿರ್ಧಾರವನ್ನು ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

ನಾನು ಅವರಿಗೆ ನೀಡಿದ ಎಲ್ಲ ಪ್ರಸ್ತಾವನೆಗಳನ್ನೂ ಅವರು ತಿರಸ್ಕರಿಸಿದ್ದಾರೆ. ಹೀಗಾಗಿ ನಾವು ಪಶ್ಚಿಮ ಬಂಗಾಳದಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ನಿರ್ಧಾರಕ್ಕೆ ಬಂದಿದ್ದೇವೆ ಎಂದು ಮಮತಾ ಬ್ಯಾನರ್ಜಿ ಸ್ಪಷ್ಟಪಡಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ಕಾಂಗ್ರೆಸ್ ಪಕ್ಷದ ಭಾರತ್ ಜೋಡೊ ನ್ಯಾಯ ಯಾತ್ರೆಯ ಯೋಜನೆಯ ಕುರಿತು ಕಾಂಗ್ರೆಸ್ ತನಗೆ ಮಾಹಿತಿಯನ್ನೇ ನೀಡಿಲ್ಲ ಎಂದೂ ಟಿಎಂಸಿ ವರಿಷ್ಠೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸೌಜನ್ಯಕ್ಕಾದರೂ ಅವರು ಪಶ‍್ಚಿಮ ಬಂಗಾಳದಲ್ಲಿನ ಯಾತ್ರೆ ಕುರಿತು ನನಗೆ ಮಾಹಿತಿ ನೀಡಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯ ವಿರುದ್ಧ ಐಕ್ಯತಾ ರಂಗವನ್ನು ರಚಿಸುವ ವಿರೋಧ ಪಕ್ಷಗಳ ಪ್ರಯತ್ನಕ್ಕೆ ಮಮತಾ ಬ್ಯಾನರ್ಜಿ ನಿರ್ಧಾರದಿಂದ ತೀವ್ರ ಧಕ್ಕೆಯಾಗಿದೆ.

ತೃಣಮೂಲ ಕಾಂಗ್ರೆಸ್ ಬಂಗಾಳದ 42 ಲೋಕಸಭಾ ಸ್ಥಾನಗಳಿಗೆ ತನ್ನ ಸ್ವಂತ ಬಲದ ಮೇಲೆ ಚುನಾವಣೆಯನ್ನು ಎದುರಿಸಲಿದೆ ಮತ್ತು ಫಲಿತಾಂಶಗಳು ಪ್ರಕಟವಾದ ನಂತರವೇ ಕಾಂಗ್ರೆಸ್ ಜೊತೆ ಪ್ಯಾನ್-ಇಂಡಿಯಾ ಮೈತ್ರಿಯನ್ನು ಪರಿಗಣಿಸುತ್ತದೆ ಎಂದು  ಮಮತಾ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಯಾವುದೇ ಮೈತ್ರಿ ಇಲ್ಲ. ಇಂಡಿಯಾ ಮೈತ್ರಿ ಒಕ್ಕೂಟ ಇತರ ರಾಜ್ಯಗಳಲ್ಲಿ ಆಯಾ ಪಕ್ಷಗಳ ನೇತೃತ್ವದಲ್ಲಿ ನಡೆಯಲಿದೆ. ಆದರೆ ಪಶ್ಚಿಮ ಬಂಗಾಳದಲ್ಲಿ ಯಾವುದೇ ಮೈತ್ರಿ ಇಲ್ಲ. ಇಂಡಿಯಾ ಒಕ್ಕೂಟದ ಯಾವುದೇ ನಿಯಮಗಳು, ಮಾರ್ಗಸೂಚಿಗಳು ಪಶ್ಚಿಮ ಬಂಗಾಳಕ್ಕೆ ಅನ್ವಯವಾಗುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಸ್ಪಷ್ಟಪಡಿಸಿದ್ದಾರೆ.

ಇದರ ಜೊತೆಗೆ ಕಾಂಗ್ರೆಸ್‌ಗೆ ಮತ್ತೊಂದು ಶಾಕ್ ನೀಡಿದ್ದಾರೆ. ಇಂಡಿಯಾ ಮೈತ್ರಿ ಒಕ್ಕೂಟದ ಕುರಿತು ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ನಿರ್ಧರಿಸಲಾಗುತ್ತದೆ ಎಂದಿದ್ದಾರೆ. ಈ ಮೂಲಕ ಮೈತ್ರಿ ಪರವಾಗಿ ಫಲಿತಾಂಶ ಬಂದರೆ, ಅಥವಾ ಮೈತ್ರಿ ಒಕ್ಕೂಟಕ್ಕೆ ಸರ್ಕಾರ ರಚನೆಗೆ ತಮ್ಮ ಅವಶ್ಯಕತೆ ಇದ್ದರೆ, ಮೈತ್ರಿ ಭಾಗವಾಗುವ ಹೊಸ ಸೂತ್ರ ಘೋಷಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT