ಸಾಂದರ್ಭಿಕ ಚಿತ್ರ 
ದೇಶ

ದೆಹಲಿ: ಚಳಿ ಕಾಯಿಸಿಕೊಳ್ಳಲು ಸ್ಪ್ಲೆಂಡರ್ ಬೈಕ್‌ಗೆ ಬೆಂಕಿ ಹಚ್ಚಿದ ವ್ಯಕ್ತಿಯ ಬಂಧನ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚಳಿ ಹೆಚ್ಚುತ್ತಿದ್ದು, ನಗರದ ಪುಲ್ ಪ್ರಹ್ಲಾದ್‌ಪುರ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಚಳಿ ಕಾಯಿಸಿಕೊಳ್ಳಲು ಮೋಟಾರ್ ಸೈಕಲ್‌ಗೆ ಬೆಂಕಿ ಹಚ್ಚಿದ ಘಟನೆ ಗುರುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚಳಿ ಹೆಚ್ಚುತ್ತಿದ್ದು, ನಗರದ ಪುಲ್ ಪ್ರಹ್ಲಾದ್‌ಪುರ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಚಳಿ ಕಾಯಿಸಿಕೊಳ್ಳಲು ಮೋಟಾರ್ ಸೈಕಲ್‌ಗೆ ಬೆಂಕಿ ಹಚ್ಚಿದ ಘಟನೆ ಗುರುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೈಕಿಗೆ ಬೆಂಕಿ ಹಚ್ಚಿ ಚಳಿ ಕಾಯಿಸಿಕೊಳ್ಳುತ್ತಿರುವ 2.5 ನಿಮಿಷಗಳ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಕಿಶನ್ ಕುಮಾರ್ ಎಂಬ ವ್ಯಕ್ತಿ ಜಿಸಿ ಬ್ಲಾಕ್‌ನ ಲೇನ್‌ನಲ್ಲಿ ನಿಲ್ಲಿಸಿದ್ದ ಹೀರೋ ಸ್ಪ್ಲೆಂಡರ್ ಬೈಕಿಗೆ ಬೆಂಕಿ ಹಚ್ಚಿದ್ದಾರೆ.

ಉರಿಯುತ್ತಿರುವ ದ್ವಿಚಕ್ರ ವಾಹನದ ಮುಂದೆ ನಿಂತು ಕಿಶನ್ ಕುಮಾರ್ ಚಳಿ ಕಾಯಿಸಿಕೊಳ್ಳುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

"ಇಂದು ಬೆಳಗ್ಗೆ 3 ಗಂಟೆ ಸುಮಾರಿಗೆ ಕುಮಾರ್ ಹೀರೋ ಸ್ಪ್ಲೆಂಡರ್ ಬೈಕಿಗೆ ಬೆಂಕಿ ಹಚ್ಚಿ, ಅದರ ಮೇಲೆ ಗೋಣಿಚೀಲವನ್ನು ಹಾಕಿದ್ದಾರೆ" ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಮ್ಮ ಬೈಕಿಗೆ ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಅದರ ಮಾಲೀಕರು ಮತ್ತು ಇನ್ನೊಬ್ಬ ನೆರೆಯವರು ತಕ್ಷಣ ತಮ್ಮ ಮನೆಗಳಿಂದ ಹೊರಬಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

"ನಮಗೆ ಇಂದು ಬೆಳಗ್ಗೆ 4.37 ಕ್ಕೆ ಕರೆ ಬಂದಿತು ಮತ್ತು ಸ್ಥಳಕ್ಕೆ ಪೊಲೀಸ್ ತಂಡವನ್ನು ಕಳುಹಿಸಲಾಯಿತು. ಅಗ್ನಿಶಾಮಕ ಸಿಬ್ಬಂದಿಯ ಸಹಾಯದಿಂದ ಬೆಂಕಿಯನ್ನು ನಂದಿಸಲಾಯಿತು. ಆದರೆ ಆ ಹೊತ್ತಿಗೆ ಮೋಟಾರ್‌ಸೈಕಲ್ ಸಂಪೂರ್ಣವಾಗಿ ಸುಟ್ಟುಹೋಗಿತ್ತು" ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ. ವಿಜಯೇಂದ್ರ

ಯುವ ಜನತೆಯ ಆಕ್ರೋಶ ತಡೆಯಲು ಸಾಧ್ಯವಿಲ್ಲ, ಇಡೀ ದೇಶ ಜಂತರ್ ಮಂತರ್ ಆಗಲಿದೆ: ಪ್ರಕಾಶ್ ರಾಜ್

'ಅಧರ್ಮ ಎಸಗಿದವರಿಗೆ ಶಿಕ್ಷೆ ನೀಡುವುದೂ ಧರ್ಮವೇ'; ಮೀರತ್ ಹತ್ಯೆ ಪ್ರಕರಣ ಶಿಕ್ಷೆ ಪ್ರಕಟ ವೇಳೆ ನ್ಯಾಯಾಧೀಶರಿಂದ ಭಗವದ್ಗೀತೆ ಉಲ್ಲೇಖ!

ಟೀಂ ಇಂಡಿಯಾ ಸೆಲೆಕ್ಷನ್ ಕಮಿಟಿ ಅಧ್ಯಕ್ಷರ ಆಯ್ಕೆ: ಮೇಜರ್ ಟ್ವಿಸ್ಟ್, ರೇಸ್ ನಿಂದ ಪಾರ್ಥಿವ್‌ ಪಟೇಲ್ ಔಟ್? 24 ಟೆಸ್ಟ್‌ ಅನುಭವದ ಮಾಜಿ ಕ್ರಿಕೆಟಿಗನ ಹೆಸರು ಮುಂಚೂಣಿಗೆ!

ಗಂಡನ ಕೊಂದು ನೀಲಿ ಡ್ರಮ್ ನಲ್ಲಿ ಮುಚ್ಚಿಟ್ಟ ಕೇಸ್: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ ಗೆ ಮರಣದಂಡನೆ ಶಿಕ್ಷೆ!