ದೆಹಲಿಯಲ್ಲಿ ಇಂದು ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಸೇರ್ಪಡೆ 
ದೇಶ

'ಮೋದಿ ಮತ್ತೆ ಪ್ರಧಾನಿಯಾಗಬೇಕು, ಬಿಜೆಪಿಗೆ ಮತ್ತಷ್ಟು ಬಲ ಬರಬೇಕು': ಜಗದೀಶ್ ಶೆಟ್ಟರ್

ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕು. ಅವರ ಕೈ ಬಲಪಡಿಸಬೇಕು, ಬಿಜೆಪಿಯ ಶಕ್ತಿ ಮತ್ತಷ್ಟು ಹೆಚ್ಚಬೇಕು, ಈ ನಿಟ್ಟಿನಲ್ಲಿ ಇಂದು ಮತ್ತೆ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ನವದೆಹಲಿ: ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಈ ದೇಶದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ಆಗಿವೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕು. ಅವರ ಕೈ ಬಲಪಡಿಸಬೇಕು, ಬಿಜೆಪಿಯ ಶಕ್ತಿ ಮತ್ತಷ್ಟು ಹೆಚ್ಚಬೇಕು, ಈ ನಿಟ್ಟಿನಲ್ಲಿ ಇಂದು ಮತ್ತೆ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಇಂದು ದೆಹಲಿಯಲ್ಲಿ ಬಿಜೆಪಿಯ ರಾಷ್ಟ್ರ ನಾಯಕರನ್ನು ಭೇಟಿ ಮಾಡಿ ಪಕ್ಷಕ್ಕೆ ಸೇರ್ಪಡೆಯಾಗುವ ಕುರಿತು ಮಾತುಕತೆ ನಡೆಸಿದ ನಂತರ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ಸಮ್ಮುಖದಲ್ಲಿ  ಅಧಿಕೃತವಾಗಿ ಸೇರ್ಪಡೆಯಾದರು. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದೊಂದು ವರ್ಷದಲ್ಲಿ ಸಾಕಷ್ಟು ಬೆಳವಣಿಗೆಗಳಾಗಿವೆ. ಬಿಜೆಪಿ ನಾಯಕರು ನನ್ನ ಜೊತೆ ಸತತ ಸಂಪರ್ಕದಲ್ಲಿದ್ದರು. ನೀವು ಬಿಜೆಪಿಗೆ ಮತ್ತೆ ಬನ್ನಿ, ಪಕ್ಷದ ಬಲ ಹೆಚ್ಚುತ್ತದೆ, ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎನ್ನುತ್ತಿದ್ದರು. ಪಕ್ಷದ ಹೈಕಮಾಂಡ್ ಅವರನ್ನು ಇಂದು ಭೇಟಿ ಮಾಡಿದಾಗ ಗೌರವಯುತವಾಗಿ ಬರಮಾಡಿಕೊಂಡರು. ಹೀಗಾಗಿ ಸ್ವ ಇಚ್ಛೆಯಿಂದ ಮತ್ತೆ ಬಿಜೆಪಿಗೆ ಸೇರುತ್ತಿದ್ದೇನೆ ಎಂದರು.

ಕಾಂಗ್ರೆಸ್ ನಾಯಕರು ನನ್ನನ್ನು ಚೆನ್ನಾಗಿ ನಡೆಸಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಧನ್ಯವಾದಗಳು ಎಂದರು. 

ಇಮೇಲ್ ಮೂಲಕ ರಾಜೀನಾಮೆ ಪತ್ರ: ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ, ರಾಜ್ಯಾಧ್ಯಕ್ಷರಿಗೆ ಪತ್ರವನ್ನು ಕಳಿಸಿದ್ದೇನೆ. ಇನ್ನು ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಪತ್ರವನ್ನು ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ಇಮೇಲ್ ಮೂಲಕ ಕಳಿಸಿದ್ದೇನೆ ಎಂದು ಶೆಟ್ಟರ್ ತಿಳಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT