ಸಾಂದರ್ಭಿಕ ಚಿತ್ರ 
ದೇಶ

ಲೋಕಸಭೆ ಚುನಾವಣೆಗೆ ಬಿಜೆಪಿ ಉಸ್ತುವಾರಿ ನೇಮಕ: ರಾಜ್ಯಕ್ಕೆ ಕರ್ನಾಟಕಕ್ಕೆ ರಾಧ ಮೋಹನ್ ದಾಸ್ -ಸುಧಾಕರ್ ರೆಡ್ಡಿ!

ಲೋಕಸಭಾ ಚುನಾವಣೆಗೆ ತಯಾರಿಗಳು ಭರದಿಂದ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್‌ ಇದೀಗ ರಾಜ್ಯವಾರು ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ.

ನವದೆಹಲಿ: ಲೋಕಸಭಾ ಚುನಾವಣೆಗೆ ತಯಾರಿಗಳು ಭರದಿಂದ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್‌ ಇದೀಗ ರಾಜ್ಯವಾರು ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ.

ಈ ಸಂಬಂಧ ಬಿಜೆಪಿ ಹೈಕಮಾಂಡ್‌ ರಾಜ್ಯಾವಾರು ಉಸ್ತುವಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕದ ಉಸ್ತುವಾರಿಯಾಗಿ ಸಂಸದ ಡಾ.ರಾಧ ಮೋಹನ್ ದಾಸ್ ಅಗ್ರವಾಲ್ ಮತ್ತು ಸಹ ಉಸ್ತುವಾರಿಯಾಗಿ ಸುಧಾಕರ್ ರೆಡ್ಡಿ  ಅವರನ್ನ ನೇಮಕ ಮಾಡಿದೆ.

ಕೇರಳಕ್ಕೆ ಪ್ರಕಾಶ್‌ ಜಾವ್ಡೇಕರ್‌, ಪುದುಚೇರಿಗೆ ನಿರ್ಮಲ್ ಕುಮಾರ್ ಸುರಾನ, ಬೈಜಯಂತ್ ಪಾಂಡಾ ಉತ್ತರ ಪ್ರದೇಶದ ನೂತನ ಉಸ್ತುವಾರಿಯಾಗಲಿದ್ದಾರೆ. ಬಿಹಾರದ ಚುನಾವಣಾ ಉಸ್ತುವಾರಿಯಾಗಿ ವಿನೋದ್ ತಾವ್ಡೆ ನೇಮಕ ಅವರನ್ನು ನೇಮಕ ಮಾಡಲಾಗಿದೆ.

ವಿಜಯಪಾಲ್ ತೋಮರ್ ಅವರನ್ನು ಒಡಿಶಾ ಹಾಗೂ ಶ್ರೀಕಾಂತ್ ಶರ್ಮಾ ಅವರನ್ನು ಹಿಮಾಚಲದ ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಒಟ್ಟು 23 ಮಂದಿಯನ್ನು ಉಸ್ತುವಾರಿ ಮತ್ತು ಸಹ ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!