ಅತ್ಯಾಚಾರ (ಸಾಂದರ್ಭಿಕ ಚಿತ್ರ) 
ದೇಶ

ಮಕ್ಕಳ ಮೇಲಿನ ಅತ್ಯಾಚಾರ: ದಾಖಲಾಗುವ ಪ್ರಕರಣಗಳ ಪ್ರಮಾಣ ಶೇ 96ರಷ್ಟು ಹೆಚ್ಚಳ: CRY ವರದಿ

ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳು ದಾಖಲಾಗುವ ಪ್ರಮಾಣವು 2016ರಿಂದ 2022ರ ನಡುವಿನ ಅವಧಿಯಲ್ಲಿ ಶೇ 96ರಷ್ಟು ಹೆಚ್ಚಳವಾಗಿದೆ ಎಂದು 'ಚೈಲ್ಡ್ ರೈಟ್ಸ್‌ ಆ್ಯಂಡ್‌ ಯೂ’ (ಸಿಆರ್‌ವೈ) ಸ್ವಯಂ ಸೇವಾ ಸಂಸ್ಥೆ ಹೇಳಿದೆ.

ನವದೆಹಲಿ: ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳು ದಾಖಲಾಗುವ ಪ್ರಮಾಣವು 2016ರಿಂದ 2022ರ ನಡುವಿನ ಅವಧಿಯಲ್ಲಿ ಶೇ 96ರಷ್ಟು ಹೆಚ್ಚಳವಾಗಿದೆ ಎಂದು 'ಚೈಲ್ಡ್ ರೈಟ್ಸ್‌ ಆ್ಯಂಡ್‌ ಯೂ’ (ಸಿಆರ್‌ವೈ) ಸ್ವಯಂ ಸೇವಾ ಸಂಸ್ಥೆ ಹೇಳಿದೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊದ (ಎನ್‌ಸಿಆರ್‌ಬಿ) ದತ್ತಾಂಶಗಳನ್ನು ವಿಶ್ಲೇಷಿಸಿ ಸಿಆರ್‌ವೈ ಈ ವರದಿ ಮಾಡಿದ್ದು. ಸಾರ್ವಜನಿಕರಲ್ಲಿ ಜಾಗೃತಿ ಮೂಡಿರುವ ಕಾರಣ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು ನಡೆದಾಗ ದಾಖಲಾಗುವ ದೂರುಗಳ ಪ್ರಮಾಣ ಹೆಚ್ಚಿದೆ ಎಂದು ಸಿಆರ್‌ವೈನ ಸಂಶೋಧನಾಂಶ ವಿಭಾಗದ ನಿರ್ದೇಶಕ ಶುಭೇಂದು ಭಟ್ಟಾಚಾರ್ಜಿ ಹೇಳಿದರು.

ಈ ಬಗ್ಗೆ ಮಾತನಾಡಿರುವ ಅವರು, 'ಈಚೆಗೆ ಆಗಿರುವ ಕಾನೂನು ಸುಧಾರಣೆಗಳು ಮತ್ತು ನೀತಿಗಳ ಬದಲಾವಣೆ ಕೂಡ ಪ್ರಕರಣಗಳು ದಾಖಲಾಗಲು ಕಾರಣವಾಗಿದೆ. ಉನ್ನತ ಮಟ್ಟದ ಪ್ರಕರಣಗಳಲ್ಲಿ ಸಮುದಾಯಗಳು ಮತ್ತು ಸಂಘಟನೆಗಳ ಸಹಕಾರ, ಮಾಧ್ಯಮಗಳು ನಿರ್ವಹಿಸುವ ಪಾತ್ರವೂ ಹಿರಿದಾಗಿದೆ. ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯಗಳು ಸೇರಿದಂತೆ ಸೂಕ್ಷ್ಮ ವಿಚಾರಗಳನ್ನು ಚರ್ಚಿಸಿ ಅದಕ್ಕೆ ಪರಿಹಾರ ಕಂಡುಕೊಳ್ಳಲು ಯತ್ನಿಸುವ ಮೂಲಕ ಸಮಾಜದಲ್ಲಿದ್ದ ‘ಮೌನ ಸಂಸ್ಕೃತಿ’ಯನ್ನು ಮುರಿಯಲಾಗಿದೆ ಎಂದು  ಎಂದು ಭಟ್ಟಾಚಾರ್ಜಿ ಅಭಿಪ್ರಾಯಪಟ್ಟರು.

ಪ್ರಕರಣಗಳನ್ನು ವರದಿ ಮಾಡುವ ಕಾರ್ಯವಿಧಾನಗಳು ಜನರಲ್ಲಿ ನಂಬಿಕೆ ಮೂಡಿಸಿವೆ. ಆನ್‌ಲೈನ್‌ ಪೋರ್ಟಲ್‌ಗಳು ಮತ್ತು ಕೆಲವು ಸಂಸ್ಥೆಗಳು ಇಂತಹ ಪ್ರಕರಣಗಳನ್ನು ದಾಖಲಿಸಲು ಸಂತ್ರಸ್ತ ಮಕ್ಕಳಿಗೆ ಮತ್ತು ಅವರ ಕುಟುಂಬಕ್ಕೆ ಪ್ರೋತ್ಸಾಹ ನೀಡುತ್ತಿವೆ ಎಂದರು.

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಕುರಿತು 2016ರಲ್ಲಿ 19,765 ಪ್ರಕರಣಗಳು ದಾಖಲಾಗಿದ್ದರೆ, 2017ರಲ್ಲಿ 27,616 ಪ್ರಕರಣಗಳು, 2018ರಲ್ಲಿ 30,917, 2019ರಲ್ಲಿ 31,132, 2020ರಲ್ಲಿ 30,705, 2021ರಲ್ಲಿ 36,381 ಪ್ರಕರಣಗಳು ಮತ್ತು 2022ರಲ್ಲಿ 38,911 ಪ್ರಕರಣಗಳು ದಾಖಲಾಗಿವೆ ಎಂದು ಸಿಆರ್ ವೈ ದತ್ತಾಂಶ ಮಾಹಿತಿ ನೀಡಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT