ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ನಿತೀಶ್ ಕುಮಾರ್ 
ದೇಶ

ಬಿಹಾರ: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ಸಂಜೆ ಬಿಜೆಪಿ ಜೊತೆಗೆ ಹೊಸ ಸರ್ಕಾರ ರಚನೆ ಸಾಧ್ಯತೆ!

ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ಭಾನುವಾರ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಕಳೆದ ಎರಡ್ಮೂರು ದಿನಗಳಿಂದ ಬಿಹಾರ ರಾಜಕಾರಣದಲ್ಲಿ ಎದಿದ್ದ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದು, ಎನ್ ಡಿಎ ಜೊತೆಗೆ ಹೊಸ ಸರ್ಕಾರ ರಚಿಸುವ ಸಾಧ್ಯತೆಯಿದೆ. 

ಬಿಹಾರ: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ಭಾನುವಾರ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಕಳೆದ ಎರಡ್ಮೂರು ದಿನಗಳಿಂದ ಬಿಹಾರ ರಾಜಕಾರಣದಲ್ಲಿ ಎದಿದ್ದ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದು, ಎನ್ ಡಿಎ ಜೊತೆಗೆ ಹೊಸ ಸರ್ಕಾರ ರಚಿಸುವ ಸಾಧ್ಯತೆಯಿದೆ. 

ಇಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ಜೆಡಿಯು ಶಾಸಕರ ಸಭೆ ನಡೆಸಿದ ಬಳಿಕ ಹಿರಿಯ ಸಚಿವ ಬಿಜೇಂದ್ರ ಯಾದವ್ ಅವರೊಂದಿಗೆ ರಾಜಭವನಕ್ಕೆ ತೆರಳಿದ ನಿತೀಶ್ ಕುಮಾರ್, ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. 

ರಾಜ್ಯಪಾಲರು ರಾಜೀನಾಮೆ ಅಂಗೀಕರಿಸಿದ್ದು, ಹೊಸ ಸರ್ಕಾರ ರಚನೆಯಾಗುವವರೆಗೂ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯುವಂತೆ ನಿತೀಶ್ ಕುಮಾರ್ ಅವರಿಗೆ ರಾಜ್ಯಪಾಲರು ಸೂಚಿಸಿರುವುದಾಗಿ ಅಧಿಕೃತ ಮೂಲಗಳು ತಿಳಿಸಿವೆ.

ರಾಜ್ಯಪಾಲರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಿತೀಶ್ ಕುಮಾರ್, ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ರಾಜ್ಯದಲ್ಲಿ ಸರ್ಕಾರವನ್ನು ವಿಸರ್ಜಿಸುವಂತೆ ರಾಜ್ಯಪಾಲರಿಗೂ ಹೇಳಿರುವುದಾಗಿ ತಿಳಿಸಿದರು. ಮಹಾಘಟಬಂಧನ್ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲದ ಕಾರಣ ಈ ಪರಿಸ್ಥಿತಿ ಬಂದಿದೆ. ಎಲ್ಲರಿಂದ ಅಭಿಪ್ರಾಯ ತಿಳಿದುಕೊಂಡು ಇಂದು ಸರ್ಕಾರ ವಿಸರ್ಜನೆಯಾಗಿದೆ ಎಂದರು.

ಬಿಹಾರದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ನಡುವೆ ಪಟ್ನಾದ ಬಿಜೆಪಿ ಕಚೇರಿಯಲ್ಲಿ ಪಕ್ಷದ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದ್ದು, ಕೇಂದ್ರ ಸಚಿವ ನಿತ್ಯಾನಂದ ರಾಯ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ, ಸಂಸದ ರವಿಶಂಕರ್ ಪ್ರಸಾದ್ ಸಭೆಗೆ ಆಗಮಿಸಿದ್ದಾರೆ. 

ಇಂದು ಸಂಜೆ ಬಿಜೆಪಿಯೊಂದಿಗೆ ಸೇರಿ ನಿತೀಶ್ ಕುಮಾರ್ ಹೊಸ ಸರ್ಕಾರ ರಚಿಸುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್